ಯಲಬುರ್ಗಾ: ತಾಲ್ಲೂಕಿನ ಬಳೂಟಗಿ ಗ್ರಾಮದಲ್ಲಿ ಈಚೆಗೆ ಬಿರುಗಾಳಿಗೆ ಮನೆಯ ಚಾವಣಿ ಕುಸಿದು ಮೃತಪಟ್ಟಿದ್ದ ಶಿವಲೀಲಾ ಶೇಖರಗೌಡ ದುಗ್ಗಲದ ಕುಟುಂಬಕ್ಕೆ ಸರ್ಕಾರದ ವತಿಯಿಂದ ₹5 ಲಕ್ಷ ಪರಿಹಾರ ನೀಡಲಾಯಿತು.

ಶಾಸಕ ಹಾಲಪ್ಪ ಆಚಾರ ಪರಿಹಾರದ ಆದೇಶ ಪ್ರತಿಯನ್ನು ಫಲಾನುಭವಿಗೆ ವಿತರಿಸಿದರು.

ಬಳಿಕ ಮಾತನಾಡಿ,‘ಅನಿರೀಕ್ಷಿತ ಘಟನೆಯಿಂದ ಕುಟುಂಬಕ್ಕೆ ಭಾರಿ ನಷ್ಟವಾಗಿದೆ. ಅಭಿವೃದ್ಧಿಗೆ ಪರಿಹಾರದ ಹಣ ಉಪಯೋಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ತಹಶೀಲ್ದಾರ್ ಶ್ರೀಶೈಲ್ ತಳವಾರ ಮಾತನಾಡಿ,‘ಮೃತ ವ್ಯಕ್ತಿಯ ಪತಿಯ ಖಾತೆಗೆ ಆರ್‌ಟಿಜಿಎಸ್ ಮೂಲಕ ಹಣ ಸಂದಾಯ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು. ಸಿಎಚ್.ಪೊಲೀಸ್ ಪಾಟೀಲ, ವೀರಣ್ಣ ಹುಬ್ಬಳ್ಳಿ ಹಾಗೂ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.