ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾವಣಿ ಕುಸಿದು ಸಾವು: ಪರಿಹಾರ

Last Updated 10 ಜುಲೈ 2021, 4:11 IST
ಅಕ್ಷರ ಗಾತ್ರ

ಯಲಬುರ್ಗಾ: ತಾಲ್ಲೂಕಿನ ಬಳೂಟಗಿ ಗ್ರಾಮದಲ್ಲಿ ಈಚೆಗೆ ಬಿರುಗಾಳಿಗೆ ಮನೆಯ ಚಾವಣಿ ಕುಸಿದು ಮೃತಪಟ್ಟಿದ್ದ ಶಿವಲೀಲಾ ಶೇಖರಗೌಡ ದುಗ್ಗಲದ ಕುಟುಂಬಕ್ಕೆ ಸರ್ಕಾರದ ವತಿಯಿಂದ ₹5 ಲಕ್ಷ ಪರಿಹಾರ ನೀಡಲಾಯಿತು.

ಶಾಸಕ ಹಾಲಪ್ಪ ಆಚಾರ ಪರಿಹಾರದ ಆದೇಶ ಪ್ರತಿಯನ್ನು ಫಲಾನುಭವಿಗೆ ವಿತರಿಸಿದರು.

ಬಳಿಕ ಮಾತನಾಡಿ,‘ಅನಿರೀಕ್ಷಿತ ಘಟನೆಯಿಂದ ಕುಟುಂಬಕ್ಕೆ ಭಾರಿ ನಷ್ಟವಾಗಿದೆ. ಅಭಿವೃದ್ಧಿಗೆ ಪರಿಹಾರದ ಹಣ ಉಪಯೋಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ತಹಶೀಲ್ದಾರ್ ಶ್ರೀಶೈಲ್ ತಳವಾರ ಮಾತನಾಡಿ,‘ಮೃತ ವ್ಯಕ್ತಿಯ ಪತಿಯ ಖಾತೆಗೆ ಆರ್‌ಟಿಜಿಎಸ್ ಮೂಲಕ ಹಣ ಸಂದಾಯ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು. ಸಿಎಚ್.ಪೊಲೀಸ್‍ ಪಾಟೀಲ, ವೀರಣ್ಣ ಹುಬ್ಬಳ್ಳಿ ಹಾಗೂ ಸಿಬ್ಬಂದಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT