ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸುಗಮ ಪರೀಕ್ಷೆ ಎಲ್ಲರ ಜವಾಬ್ದಾರಿ: ಡಿಡಿಪಿಐ

Published 27 ಜೂನ್ 2024, 5:10 IST
Last Updated 27 ಜೂನ್ 2024, 5:10 IST
ಅಕ್ಷರ ಗಾತ್ರ

ಕೊಪ್ಪಳ: ಜೂನ್ 30ರಂದು ಜಿಲ್ಲೆಯಲ್ಲಿ ನಡೆಯಲಿರುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮಕ್ಕೆ ಅವಕಾಶವಿಲ್ಲದಂತೆ ಎಚ್ಚರಿಕೆಯಿಂದ ಸುಗಮ ಪರೀಕ್ಷೆ ನಡೆಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಬಿರಾದಾರ ಹೇಳಿದರು.

ಬುಧವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ‘ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಸ್ಥಾನಿಕ ಜಾಗೃತದಳ, ಮಾರ್ಗಾಧಿಕಾರಿಗಳು, ವೀಕ್ಷಕರು ಹಾಗೂ ಇತರೆ ಪರೀಕ್ಷಾ ನಿಯೋಜಿತ ಸಿಬ್ಬಂದಿ ಪರೀಕ್ಷಾ ದಿನದಂದು ನಿಗದಿತ ಸಮಯಕ್ಕೆ ಸರಿಯಾಗಿ ಕೇಂದ್ರದಲ್ಲಿ ಹಾಜರಿರಬೇಕು. ಕಾಲಮಿತಿಯಲ್ಲಿ ನಿಯಮಾನುಸಾರ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಂಡು, ಸುಗಮ ಪರೀಕ್ಷೆಗೆ ಅವಕಾಶ ಕಲ್ಪಿಸಬೇಕು’ ಎಂದರು.

‘ಜಿಲ್ಲೆಯಲ್ಲಿ 30ರಂದು ಎರಡು ಅಧಿವೇಶನಗಳಲ್ಲಿ ಕೆಟಿಇಟಿ ಪರೀಕ್ಷೆ ನಡೆಯಲಿದೆ. ಕೊಪ್ಪಳ ನಗರ ಹಾಗೂ ಸುತ್ತ 5 ಕಿ.ಮೀ. ವ್ಯಾಪ್ತಿಯ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಬೆಳಗಿನ ಅವಧಿಗೆ 15 ಪರೀಕ್ಷಾ ಕೇಂದ್ರಗಳಲ್ಲಿ 4,217 ಅಭ್ಯರ್ಥಿಗಳು ಹಾಗೂ ಮಧ್ಯಾಹ್ನದ ಅವಧಿಯಲ್ಲಿ 29 ಕೇಂದ್ರಗಳಲ್ಲಿ 7277 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅಂದು ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಲಾಗುವುದು. ಪರೀಕ್ಷಾ ಕೇಂದ್ರದೊಳಗೆ ಅಭ್ಯರ್ಥಿಗಳು ವಾಚ್ ಸೇರಿದಂತೆ ಯಾವುದೇ ರೀತಿಯ ಎಲೆಕ್ರ್ಟಾನಿಕ್‌ ವಸ್ತುಗಳನ್ನು ತರುವಂತಿಲ್ಲ’ ಎಂದರು.

ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಶಿವಪ್ಪ ಸುಬೇದಾರ, ಮುಖ್ಯೋಪಾಧ್ಯಾಯರಾದ ನೀಲಕಂಠಪ್ಪ ಕಂಬಳಿ, ಪರೀಕ್ಷಾ ನಿಯೋಜಿತ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಸಿಬ್ಬಂದಿ, ಖಜಾನೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT