ಶನಿವಾರ, ಮಾರ್ಚ್ 25, 2023
30 °C

‘ಬೆಲೆ ಏರಿಕೆಯೇ ಬಿಜೆಪಿ ಸಾಧನೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ‘ಡೀಸೆಲ್‌, ಪೆಟ್ರೋಲ್, ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ ಮಾಡಿದ್ದೆ ಬಿಜೆಪಿ ಸರ್ಕಾರದ ಸಾಧನೆ’ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಂಗಾಧರಸ್ವಾಮಿ ಕಲುಬಾಗಿಲಮಠ ಹೇಳಿದರು.

ಇಲ್ಲಿನ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಕಿಸಾನ್ ಗ್ರಾಮೀಣ ಘಟಕದ ವತಿಯಿಂದ ಸೋಮವಾರ ನಡೆದ ಪಕ್ಷ ಸಂಘಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕ್ಷೇತ್ರದಲ್ಲಿ ಶಿವರಾಜ ತಂಗಡಗಿ ಅವರು ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೆ ತಂದು ಅಂತರ್ಜಲ ಮಟ್ಟ ಹೆಚ್ಚಿಸಲು ಕಾರಣರಾಗಿದ್ದಾರೆ. ಕನಕಗಿರಿ, ಕಾರಟಗಿ ಗ್ರಾಮಗಳನ್ನು ಮೇಲ್ದರ್ಜೆಗೆ ಏರಿಸಿದ್ದಾರೆ. ಎರಡು ತಾಲ್ಲೂಕು ಕೇಂದ್ರಗಳನ್ನು ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದರು.

ಗ್ರಾಮೀಣ ಘಟಕದ ಅಧ್ಯಕ್ಷ ಪಂಪಾಪತಿ ದಾನಶೆಟ್ಟಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬಸಂತಗೌಡ ಪಾಟೀಲ, ಹಾಲುಮತ ಸಮಾಜದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಸಿದ್ದಪ್ಪ ನೀರಲೂಟಿ, ಅವರು ಪಕ್ಷ ಸಂಘಟನೆಯ ಕುರಿತು ಮಾತನಾಡಿದರು.

ವಿವಿಧ ಘಟಕದ ಪದಾಧಿಕಾರಿಗಳಾದ ರವಿ ಪಾಟೀಲ, ದೊಡ್ಡನಗೌಡ ಪಾಟೀಲ ಹಣವಾಳ, ಕೆ.ಆರ್.ನಾಯಕ, ಶೇಖರಗೌಡ ಪಾಟೀಲ ಹಾಗೂ ಕಿಸಾನ್ ಘಟಕದ ಪದಾಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.