ಬುಧವಾರ, ಆಗಸ್ಟ್ 10, 2022
19 °C
ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆ

ತೈಲ ಬೆಲೆ ಏರಿಕೆಯಿಂದ ಜನರಿಗೆ ಸಂಕಷ್ಟ: ಶಾಸಕ ಬಯ್ಯಾಪುರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಾವರಗೇರಾ: ತೈಲ ಬೆಲೆ ಏರಿಕೆ ಖಂಡಿಸಿ ಪಟ್ಟಣದ ಪಂಪಾ ಪೆಟ್ರೋಲ್ ಬಂಕ್‌ನಲ್ಲಿ ಶಾಸಕ ಅಮರೇಗೌಡ ಬಯ್ಯಾಪುರ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನೆಡಸಿದರು.

ಪೆಟ್ರೋಲ್‌ ಹಾಕಿಸಿಕೊಳ್ಳಲು ಬಂದ ಸವಾರರಿಗೆ ಶಾಸಕ ಬಯ್ಯಾಪುರ ₹100 ಕೊಟ್ಟು ಪೆಟ್ರೋಲ್ ಹಾಕಿಸಿದರು.

ಬಳಿಕ ಮಾತನಾಡಿ,‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆಡಳಿತ ನಡೆಸುವಲ್ಲಿ ವಿಫಲವಾಗಿವೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡ ಹಾಗೂ ಮಧ್ಯಮ ವರ್ಗದವರಿಗೆ ಅನ್ಯಾಯ ಮಾಡಿವೆ. ಜನ ಎಚ್ಚೆತ್ತುಕೊಂಡು ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು’ ಎಂದು ಹೇಳಿದರು.

ಉದ್ಯಮಿ ಬಸನಗೌಡ ಮಾಲಿಪಾಟೀಲ, ಪ.ಪಂ. ಅಧ್ಯಕ್ಷ ವಿಕ್ರಮ್ ರಾಯ್ಕರ್, ಪ.ಪಂ. ಉಪಾಧ್ಯಕ್ಷ ನಾರಾಯಣ ಗೌಡ ಮೆದಿಕೇರಿ, ಗ್ರಾ.ಪಂ. ಮಾಜಿ ಅಧ್ಯಕ್ಷ ವೀರಭದ್ರಪ್ಪ ನಾಲತವಾಡ, ತಾವರಗೇರಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರುದ್ರಗೌಡ ಕುಲಕರ್ಣಿ, ಡಾ.ಶಾಮೀದ್ ದೋಟಿಹಾಳ, ತಾ.ಪಂ. ಮಾಜಿ ಅಧ್ಯಕ್ಷ ದುರುಗೇಶ ನಾರಿನಾಳ, ಲಿಂಗರಾಜ ಹಂಚಿನಾಳ, ಅಮರೇಶ ಗಾಂಜಿ, ಅಮರೇಶ ಕುಂಬಾರ, ಶುಕರ್ ಅಹ್ಮದ್ ಬನ್ನು, ಸಂತೋಷ ಬಿಳೇಗುಡ್ಡ, ಶಾಮೀದ್ ನಾಡಗೌಡ, ಶಾಮಣ್ಣ ಹುನಗುಂದ, ರಾಮಣ್ಣ ಭೋವಿ, ಮಂಜು ಕುಂಬಾರ, ಕಲೀಂ ಮುಜಾವರ ಸೇರಿ ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು