ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ತೆಕ್ಕೆಗೆ ಕನಕಗಿರಿ ತಾಲ್ಲೂಕು ಪಂಚಾಯಿತಿ

Last Updated 8 ಡಿಸೆಂಬರ್ 2020, 11:07 IST
ಅಕ್ಷರ ಗಾತ್ರ

ಕನಕಗಿರಿ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆರಂಭಿಸಿರುವ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಿತು.

ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಿರೀಕ್ಷೆಯಂತೆ ನವಲಿ ಕ್ಷೇತ್ರದ ಸದಸ್ಯೆ ಗೌರಮ್ಮ ಜಡಿಯಪ್ಪ ಮುಕ್ಕುಂದಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಭೀಮಮ್ಮ ರಾಮನಗೌಡ ಬುನ್ನಟ್ಟಿ ನಾಮಪತ್ರ ಸಲ್ಲಿಸಿದ್ದರು.

ಬೇರೆಯವರಿಂದ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಅವರು ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧ ಆಯ್ಕೆ ಘೋಷಣೆ ಮಾಡಿದರು.

ಬಿಜೆಪಿಯಿಂದ ಆಯ್ಕೆಯಾಗಿದ್ದ ಗೌರಮ್ಮ 2018ರಲ್ಲಿ ಕಾಂಗ್ರೆಸ್ ಜತೆಗೆ ಗುರುತಿಸಿಕೊಂಡಿದ್ದರು. ಮತ್ತೊಬ್ಬ ಕಾಂಗ್ರೆಸ್ ಸದಸ್ಯೆ ಶಿವಮ್ಮ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದರೂ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡುವ ಭರವಸೆ ನೀಡಿದ್ದರಿಂದ ಬೇರೆ ದಾರಿ ಇಲ್ಲದೆ ಗೌರಮ್ಮ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.

ಚುನಾವಣೆ ಪ್ರಕ್ರಿಯೆಯಲ್ಲಿ ತಹಶೀಲ್ದಾರ್ ರವಿ ಅಂಗಡಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ. ಡಿ. ಮೋಹನ್ ಭಾಗವಹಿಸಿದ್ದರು.

ಅವಿರೋಧ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಕಾಲೇಜು ಮೈದಾನದಲ್ಲಿ ಜಮಾಯಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಬಣ್ಣ ಎರಚಿ ವಿಜಯೋತ್ಸವ ಆಚರಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವರಾಜ ತಂಗಡಗಿ ಮಾತನಾಡಿ,‘ಸಿಕ್ಕಿರುವ ಕಡಿಮೆ ಅವಧಿಯಲ್ಲಿ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ’ ಎಂದು ತಿಳಿಸಿದರು.

ನೂತನ ಅಧ್ಯಕ್ಷೆ ಗೌರಮ್ಮ ಮುಕ್ಕುಂದಿ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಸದಸ್ಯರಾದ ಬಸಂತಗೌಡ, ಮಲ್ಲಿಕಾರ್ಜುನಗೌಡ, ಶಿವಮ್ಮ ಚವ್ಹಾಣ, ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT