ಗಂಗಾವತಿ (ಕೊಪ್ಪಳ ಜಿಲ್ಲೆ): ‘ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವನಾಗು ಎಂದರೆ ಆಗುತ್ತೇನೆ, ಬೇಡವೆಂದರೆ ಬಿಡುತ್ತೇನೆ. 2028ರಲ್ಲಿಯೂ ನಮ್ಮದೇ ಪಕ್ಷ ಅಧಿಕಾರಕ್ಕೆ ಬರಲಿದ್ದು, ಆಗ ಸಚಿವ ಸ್ಥಾನದ ಬಗ್ಗೆ ನೋಡೋಣ’ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ನಗರದಲ್ಲಿ ಭಾನುವಾರ ಮಾಧ್ಯಮದವರ ಜೊತೆ ಮಾತನಾಡಿ ‘ಸಚಿವ ಸ್ಥಾನಕ್ಕಾಗಿ ಶಾಸಕರು ದೆಹಲಿಗೆ ಹೋಗಿರುವ ವಿಚಾರ ಮಾಧ್ಯಮಗಳ ಮೂಲಕ ಗೊತ್ತಾಗಿದ್ದು, ಅವರಿಗೆ ಶುಭವಾಗಲಿ. ಉಳಿದ ಅವಧಿಯಲ್ಲಿಯೂ ಸಿದ್ದರಾಮಯ್ಯ ನೇತೃತ್ವದಲ್ಲೇ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡಲಿದೆ. ಸಂಪುಟ ಪುನಾರಚನೆ ವರಿಷ್ಠರು ಹಾಗೂ ಮುಖ್ಯಮಂತ್ರಿಗೆ ಬಿಟ್ಟ ವಿಚಾರ’ ಎಂದರು.

‘ಲೋಕಸಭಾ ಕ್ಷೇತ್ರಗಳನ್ನು ಪುನರ್ ವಿಂಗಡನೆ ಮಾಡಲೇಬೇಕಾಗಿದೆ. ಆದರೆ ಈ ಬಗ್ಗೆ ತ್ವರಿತವಾಗಿ ಸಭೆ ಕರೆದಿರುವುದು ಸರಿಯಲ್ಲ. ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜಕೀಯ ಪಕ್ಷಗಳ ನಾಯಕರ ಸಭೆ ನಡೆಸಬೇಕು, ಈ ವಿಚಾರದಲ್ಲಿ ಅವಸರ ಮಾಡಬಾರದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.