ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಹಿಂದ ವರ್ಗ ಟಾರ್ಗೆಟ್: ಸಿದ್ದರಾಮಯ್ಯ ಆಕ್ರೋಶ

Last Updated 20 ನವೆಂಬರ್ 2022, 12:38 IST
ಅಕ್ಷರ ಗಾತ್ರ

ಕೊಪ್ಪಳ: ಯಾರು ತಮಗೆ ಮತ ಹಾಕುವುದಿಲ್ಲವೋ ಅಂಥ ಮತದಾರರನ್ನು ಮತದಾರರ ಪಟ್ಟಿಯಿಂದ ಕೈ ಬಿಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಅದರಲ್ಲಿಯೂ ಅಹಿಂದ ವರ್ಗದವರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು‌.

ಕೊಪ್ಪಳ ತಾಲ್ಲೂಕಿನ ವನಬಳ್ಳಾರಿ ಗ್ರಾಮದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು 'ಬಿಜೆಪಿ ಮತದಾರರನ್ನು ವಂಚಿಸುವ ಕೆಲಸ ಮಾಡುತ್ತಿದೆ. ಇದೆಲ್ಲ ಆ ಪಕ್ಷದ ಚುನಾವಣಾ ತಂತ್ರದ ಭಾಗವಾಗಿದೆ. ಪರಿಶಿಷ್ಟ ಹಾಗೂ ಮುಸ್ಲಿಂ ಸಮುದಾಯ ಸೇರಿದಂತೆ ಇನ್ನಿತರ ಅಹಿಂದ ವರ್ಗವನ್ನು ಗುರಿಯಾಗಿಟ್ಟುಕೊಂಡು ಬಿಜೆಪಿ ಈ ಕೆಲಸ ಮಾಡುತ್ತಿದೆ. ಬಿಜೆಪಿಗೆ ಈಗಲೇ ಸೋಲಿನ ಭಯ ಶುರುವಾಗಿದ್ದು, ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಹೆಸರು ಕೈ ಬಿಡಲಾಗಿದೆ ಎಂದು ಆರೋಪಿಸಿದರು.

ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ಬಳ್ಳಾರಿಯಲ್ಲಿ‌ ನಡೆದ ಎಸ್ ಟಿ ಸಮಾವೇಶದಲ್ಲಿ ಸಚಿವ ಶ್ರೀರಾಮುಲು ಭಾಷಣಕ್ಕೆ ಪ್ರತಿಕ್ರಿಯಿಸಿ ರಾಮುಲು ಒಬ್ಬ ಪೆದ್ದ. ಹೀಗಾಗಿ ಬಾಯಿಗೆ ಬಂದಂತೆ ಏನೆನೋ ಮಾತನಾಡುತ್ತಿದ್ದಾನೆಎಂದರು.

ಸಾವಿರಾರು ಜನ: ವನಬಳ್ಳಾರಿಯಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹನುಮಂತಪ್ಪ ಅವರ ಸಹೋದರ ಪಂಪಾಪತಿ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ಬಂದಿದ್ದರು.

ಗ್ರಾಮದ ಹೊರಭಾಗದಲ್ಲಿ ‌ನಿರ್ಮಿಸಲಾಗಿದ್ದ ಹೆಲಿಪ್ಯಾಡ್ ನಲ್ಲಿ ಸಿದ್ದರಾಮಯ್ಯ ಅವರನ್ನು ನೋಡಲು ಅಂದಾಜು ಆರು ಸಾವಿರಕ್ಕೂ ಹೆಚ್ಚು ಜನ ಸೇರಿದ್ದರು. ಹೆಲಿಕಾಪ್ಟರ್ ಬಲಿ ಓಡೋಡಿ ಬಂದು ಮುತ್ತಿಕೊಂಡರು. ಕಡಿಮೆ ಸಂಖ್ಯೆಯಲ್ಲಿ ಇದ್ದ ಪೊಲೀಸರು ಜನರನ್ನು ಚದುರಿಸಲು ಪರದಾಡಿದರು. ಸಿದ್ದರಾಮಯ್ಯ ವಾಪಸ್ ಹೋಗುವ ತನಕ ಜನ ಹೆಲಿಕಾಪ್ಟರ್ ಬಿಟ್ಟು ಸರಿಯಲಿಲ್ಲ. ಗ್ರಾಮಕ್ಕೆ ಮೊದಲ ಬಾರಿಗೆ ಬಂದಿದ್ದ ಹೆಲಿಕಾಪ್ಟರ್ ನೋಡಿ ಜನ ಸಂಭ್ರಮಪಟ್ಟರು. ಸೆಲ್ಫಿ ತೆಗೆದುಕೊಂಡುಸಂಭ್ರಮಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT