ಮಂಗಳವಾರ, ಜೂನ್ 28, 2022
26 °C

ಬಿಎಸ್‌ವೈ ಮೇಲಿನ ಕೋಪಕ್ಕೆ ಅನುದಾನ ಖೋತಾ: ಶಾಸಕ ಅಮರೇಗೌಡ ಬಯ್ಯಾಪುರ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಪ್ಪಳ: ‘ಬಿ.ಎಸ್‌.ಯಡಿಯೂರಪ್ಪ ಅವರ ಮೇಲಿನ ಕೋಪಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡದೇ ರಾಜ್ಯಕ್ಕೆ ದ್ರೋಹ ಮಾಡುತ್ತಿದೆ’ ಎಂದು ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಅಭಿಪ್ರಾಯಪಟ್ಟರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಆ ಪುಣ್ಯಾತ್ಮ ಮುಖ್ಯಮಂತ್ರಿ ಆಗಿರುವುದರಿಂದಲೇ ರಾಜ್ಯಕ್ಕೆ ಬಡತನ ಬಂದಿದೆ’ ಎಂದು ಟೀಕಿಸಿದರು.

ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತ ಮತ್ತು ಸಿಎಂ ಬದಲಾವಣೆ ವಿಚಾರವಾಗಿ ಎರಡು ಗುಂಪುಗಳು ಪೈಪೋಟಿ ನಡೆಸಿವೆ ಎಂದರು.

ಬೇರೆ ರಾಜ್ಯಗಳಲ್ಲಿ ಅತಿವೃಷ್ಟಿ, ಅನಾವೃಷ್ಟಿಯಾದರೆ ಕೇಂದ್ರ ಸರ್ಕಾರ ₹2 ಸಾವಿರ, ₹3 ಸಾವಿರ ಕೋಟಿ ಪರಿಹಾರ ನೀಡುತ್ತದೆ. ಆದರೆ ನಮ್ಮ ರಾಜ್ಯದಲ್ಲಿ ಅತಿವೃಷ್ಟಿಯಾದರೆ ಪರಿಹಾರ ನೀಡುವುದಿಲ್ಲ. ರಾಜ್ಯದ ಅತಿವೃಷ್ಟಿ ಪೀಡಿತರಿಗೆ ಇನ್ನೂ ಪರಿಹಾರ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯಡಿಯೂರಪ್ಪ ಇಲ್ಲ ಅಂದರೆ ಬಿಜೆಪಿ ಇಲ್ಲ. ಅವರನ್ನು ಸಿಎಂ ಸ್ಥಾನದಿಂದ ಇಳಿಸಲು ಹೈಕಮಾಂಡ್ ಹಾಗೂ ಸ್ಥಳೀಯ ಲೋಕಮಾಂಡ್ ಸಹ ಪ್ರಯತ್ನಿಸುತ್ತಿದೆ ಎಂದು ಲೇವಡಿ ಮಾಡಿದರು.

ಈಗಾಗಲೇ ಬಿಜೆಪಿ ಕೆಟ್ಟು ಹೋಗಿದೆ. ಈ ಹಿಂದೆ ಮಾಜಿ ಸಚಿವ ಜನಾರ್ದನ ರೆಡ್ಡಿ ಹೈದರಾಬಾದ್‌ಗೆ ಪಕ್ಷ ತೆಗೆದುಕೊಂಡು ಹೋಗಿದ್ದರು‌. ಈಗ ಸರ್ಕಾರವೇ ಕೆಟ್ಟು ಹೈದರಾಬಾದ್ ಆಗಿದೆ ಎಂದು ಟೀಕಿಸಿದರು.

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಸಿ ರಾಜ್ಯದ ಬಡ ಜನತೆಗೆ ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ. ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ ಎಂದು ಹೇಳಿ‌ದ್ದ ಬಿಜೆಪಿ, ಇಂದು ಸರ್ಕಾರದ ಸಾಧನೆ ಶೂನ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು