ಕೊಪ್ಪಳ: ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್ನನ್ನು ಕೊಂದ ರೀತಿಯಲ್ಲಿಯೇ ಕೊಲ್ಲಬೇಕು ಎಂದು ಉನ್ನತ ಶಿಕ್ಷಣ ಸಚಿವ ಸಿ.ಎಸ್. ಅಶ್ವತ್ಥನಾರಾಯಣ ಹೇಳಿಕೆ ಖಂಡಿಸಿ ನಗರದಲ್ಲಿ ಶುಕ್ರವಾರ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಕುವೆಂಪು ನಗರದ ಗುತ್ತಿಗೆದಾರ ಮಲ್ಲಿಕಾರ್ಜುನ ಪೂಜಾರ ಅವರ ಹೆಸರಿನಲ್ಲಿ ಈ ಕುರಿತು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಯಿತು.

ಅಶ್ವತ್ಥನಾರಾಯಣ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಭ್ರಷ್ಟ, ಕೋಮುವಾದಿ ಹಾಗೂ ಜನವಿರೋಧಿ ಸರ್ಕಾರ, ಇದು ಈ ಸಲದ ಚುನಾವಣೆಯಲ್ಲಿ ತೊಲಗಬೇಕು ಎಂದು ಆಗ್ರಹಿಸಿದರು. ಅಶ್ವತ್ಥನಾರಾಯಣ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ಪಕ್ಷದ ಪ್ರಮುಖರಾದ ಕೃಷ್ಣಾರಡ್ಡಿ ಗಲಬಿ, ಗಾಳೆಪ್ಪ ಪೂಜಾರ, ಕಾಟನ್ ಪಾಶಾ, ಕಿಶೋರಿ ಬೂದನೂರ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಗೊಂಡಬಾಳ, ಸುಮಂಗಲಾ ಕಂಬಳಿ, ರೂಪಾ ನಾಗರಾಳ, ಪರಶುರಾಮ್ ಕೆರಳ್ಳಿ, ಸಲೀಮ್ ಅಳವಂಡಿ, ಅಜೀಮ್ ಅತ್ತಾರ್ ಸೇರಿ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.