ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಧನ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Last Updated 12 ಜೂನ್ 2021, 13:14 IST
ಅಕ್ಷರ ಗಾತ್ರ

ಕನಕಗಿರಿ: ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ವಿದ್ಯುತ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ಗಂಗಾವತಿ- ಲಿಂಗಸುಗೂರು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್‌ಗೆ ಬಂದ ಗ್ರಾಹಕರಿಗೆ ಸಿಹಿ ತಿನ್ನಿಸಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೆಡ್ಡಿಶ್ರೀನಿವಾಸ ಮಾತನಾಡಿ,‘ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ದರ ಹೆಚ್ಚಳ ಮಾಡುವ ಮೂಲಕ ಬಿಜೆಪಿ ಸರ್ಕಾರ ಬಡವರು, ಕೂಲಿಕಾರರು, ರೈತರನ್ನು ಸಂಕಷ್ಟಕ್ಕೆ ತಳ್ಳಿದೆ. ಜನ ವಿರೋಧಿ ನೀತಿ ಅನುಸರಿಸಿದೆ’ ಎಂದು ಆರೋಪಿಸಿದರು.

ಲಾಕ್‌ಡೌನ್‌ ಸಮಯದಲ್ಲಿ ತುತ್ತು ಅನ್ನಕ್ಕೂ ಜನ ಪರದಾಡುತ್ತಿರುವಾಗ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಮಾಡಿ ಸರ್ಕಾರ ಗಾಯದ ಮೇಲೆ ಬರೆ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗಂಗಾವತಿ ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ರಮೇಶ ನಾಯಕ, ಎಪಿಎಂಸಿ ಮಾಜಿ ಅಧ್ಯಕ್ಷ ಗಂಗಾಧರಸ್ವಾಮಿ ಕಲುಬಾಗಿಲಮಠ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಮರೇಶ ಗೋನಾಳ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಶರಣಬಸಪ್ಪ ಭತ್ತದ, ಮುಖಂಡರಾದ ಸಿದ್ದಪ್ಪ ನೀರ್ಲೂಟಿ ಹಾಗೂ ದೇಸಾಯಿಗೌಡ ಅವರು ಮಾತನಾಡಿದರು.

ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರಾದ ಶರಣಬಸಪ್ಪ ಭತ್ತದ, ಮಹ್ಮದಪಾಷ ಮುಲ್ಲಾರ, ಮಂಜುನಾಥ ಗಡಾದ, ಖಾಜಸಾಬ ಗುರಿಕಾರ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಮಲ್ಲಿಕಾರ್ಜುನಗೌಡ, ಬಸಂತಗೌಡ ಪ್ರಮುಖರಾದ ಕೆ. ಎಚ್. ಕುಲಕರ್ಣಿ, ರಾಜಸಾಬ ನಂದಾಪುರ, ರಾಮನಗೌಡ ಬುನ್ನಟ್ಟಿ, ಅನಿಲಕುಮಾರ ಬಿಜ್ಜಳ, ಶರಣೆಗೌಡ ಪಾಟೀಲ, ನಾಗೇಶ ಬಡಿಗೇರ, ಕೆ, ವಿರೂಪಾಕ್ಷಿ, ಹನುಮೇಶ ವರ್ಕ್ ಖೇಡ, ಶಾಂತಪ್ಪ ಬಸರಿಗಿಡದ ಹಾಗೂ ಗಂಗಾಧರ ಚೌಡ್ಕಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT