ಶುಕ್ರವಾರ, ಡಿಸೆಂಬರ್ 4, 2020
20 °C
ಅಧ್ಯಕ್ಷರಾಗಿ ವಿಕ್ರಮ್, ಉಪಾಧ್ಯಕ್ಷರಾಗಿ ಹಂಪಮ್ಮ ಆಯ್ಕೆ

ತಾವರಗೇರಾ: ಪಟ್ಟಣ ಪಂಚಾಯಿತಿ ಅಧಿಕಾರ ‘ಕೈ’ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಾವರಗೇರಾ: ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿಕ್ರಮ್ ರಾಯ್ಕರ್ ಅಧ್ಯಕ್ಷರಾಗಿ ಮತ್ತು ಉಪಾಧ್ಯಕ್ಷರಾಗಿ ಪಕ್ಷೇತರ ಸದಸ್ಯೆ ಹಂಪಮ್ಮ ಕೈಲವಾಡಗಿ ಆಯ್ಕೆಯಾದರು.

ಪಟ್ಟಣ ಪಂಚಾಯಿತಿಯ ಒಟ್ಟು 18 ಸದಸ್ಯರಲ್ಲಿ ಕಾಂಗ್ರೆಸ್‌ ಪಕ್ಷದ 11 ಸದಸ್ಯರು ಮತ್ತು ಕಾಂಗ್ರೆಸ್‌ ಬೆಂಬಲಿತ ಪಕ್ಷೇತರ ಒಬ್ಬ ಮಹಿಳಾ ಸದಸ್ಯೆ ಇದ್ದರು. ಬಿಜೆಪಿ ಪಕ್ಷದ 6 ಜನ ಸದಸ್ಯರು ಇದ್ದರು.

ಪ.ಪಂ ಆಡಳಿತ ಚುಕ್ಕಾಣಿ ಕಾಂಗ್ರೆಸ್‌ ಪಕ್ಷಕ್ಕೆ ಲಭಿಸಲಿದೆ ಎಂದು ತಿಳಿದಿದ್ದರು ಸಹ, ಬಿಜೆಪಿ ಪಕ್ಷದ ಮುಖಂಡರು ಕಾಂಗ್ರೆಸ್‌ ಸದಸ್ಯರನ್ನು ಸೆಳೆಯಲು ವಿಭಿನ್ನ ಪ್ರಯತ್ನ ನಡೆಸಿದರು. ಅದು ಯಶಸ್ವಿಯಾಗದೆ ಅಧಿಕಾರದ ಗದ್ದುಗೆ ಕಾಂಗ್ರೆಸ್‌ ಪಾಲಾಯಿತು.

ಸೋಮವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಚನ್ನಪ್ಪ ಸಜ್ಜನ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಶಕುಂತಲಾ ಮುಖಯಾಜಿ ನಾಮಪತ್ರ ಸಲ್ಲಿಸಿದ್ದರು. ನಂತರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಶಾಸಕ ಅಮರೇಗೌಡ ಬಯ್ಯಾಪುರ ಸೇರಿ 13 ಜನರು ಬೆಂಬಲ ವ್ಯಕ್ತಪಡಿಸಿದರು.

ಬಿಜೆಪಿಯಿಂದ ಸ್ಪರ್ಧಿಸಿದ್ದ ಚನ್ನಪ್ಪ ಸಜ್ಜನ್ 6 ಮತ ಪಡೆದರು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿ ಪಕ್ಷದ ಸದಸ್ಯೆ ಶಕುಂತಲಾ ಮುಖಯಾಜಿ 6 ಮತ ಪಡೆದರು ಎಂದು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ತಹಶೀಲ್ದಾರ್‌ ಎಂ.ಸಿದ್ದೇಶ ಘೋಷಣೆ ಮಾಡಿದರು.

ಸ್ವ ಪಕ್ಷದ ಸದಸ್ಯೆಯ ಅಸಮಾಧಾನ: ಪಟ್ಟಣ ಪಂಚಾಯಿತಿಯ 18 ನೇ ವಾರ್ಡ್‌ನ ಕಾಂಗ್ರೆಸ್‌ ಸದಸ್ಯೆ ಪಾರ್ವತೆಮ್ಮ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು ಕೂಡ ಪಕ್ಷ ತಮ್ಮನ್ನು ಕಡೆಗಣಿಸಿದೆ ಎಂದು ಈ ಸಂದರ್ಭದಲ್ಲಿ ಅಸಮಾಧಾನ ಹೊರಹಾಕಿದ ಸದಸ್ಯೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಾಗುವುದು’ ಎಂದು
ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.