ಯಲಬುರ್ಗಾ: ಅಗತ್ಯ ವಸ್ತುಗಳು ಒಳಗೊಂಡಂತೆ ವಿವಿಧ ತೈಲಗಳ ಬೆಲೆ ಏರಿಕೆ ಹಾಗೂ ರೈತ ವಿರೋಧಿ ಕಾಯ್ದೆಯನ್ನು ಜಾರಿಗೆ ತಂದಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಶುಕ್ರವಾರ ಪಟ್ಟಣದಲ್ಲಿ ಸಾಕಷ್ಟು ಸಂಖ್ಯೆಯ ಪಕ್ಷದ ಮುಖಂಡರು, ಕಾರ್ಯಕರ್ತರು ಸ್ಥಳೀಯ ಮೊಗ್ಗಿಬಸವೇಶ್ವರ ದೇವಸ್ಥಾನದಿಂದ ಪಟ್ಟಣದ ವಿವಿಧ ಬೀದಿಗಳಲ್ಲಿ ಸಂಚರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು
ಕೂಗಿದರು.

ವೀರರಾಣಿ ಕಿತ್ತೂರು ಚನ್ನಮ್ಮ ವೃತ್ತದ ಬಳಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವರಾಜ ತಂಗಡಗಿ, ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚಿಸುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸಾಮಾನ್ಯ ಜನರ ಕಷ್ಟಗಳು ಅರ್ಥವಾಗುತ್ತಿಲ್ಲ. ಬಡ ರೈತರ ಹಿತ ಬೇಕಾಗಿಲ್ಲ. ರೈತರಿಗೆ ಮಾರಕವಾಗುವ ಕಾಯ್ದೆಗಳನ್ನು ಜಾರಿಗೆ ತಂದು ಅವರ ಬದಕನ್ನು ಸಂಪೂರ್ಣ ನಾಶಮಾಡಲು ಹೊರಟಿದೆ. ಅಲ್ಲದೇ ನ್ಯಾಯ ಸಮ್ಮತವಾಗಿ ನಡೆಸುತ್ತಿರುವ ರೈತ ಸಂಘಟನೆಗಳ ಹೋರಾಟವನ್ನು ಹತ್ತಿಕ್ಕಲು ಇಲ್ಲಸಲ್ಲದ ಪ್ರಯತ್ನಗಳನ್ನು ನಡೆಸುವ ಮೂಲಕ ರೈತರ ವಿರುದ್ಧ ದೌರ್ಜನ್ಯದ ಪ್ರವೃತಿ ತೋರುತ್ತಿದ್ದಾರೆ ಎಂದು ಆರೋಪಿಸಿದರು.

ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಮಾತನಾಡಿ, ನುಡಿದಂತೆ ನಡೆದುಕೊಳ್ಳುವಲ್ಲಿ ವಿಫಲರಾದ ಪ್ರಧಾನಿ ನರೇಂದ್ರಮೋದಿ ಜನತೆಗೆ ಒಳ್ಳೆಯದನ್ನು ಮಾಡುವ ಬದಲು ಬೆಲೆಗಳನ್ನು ಹೆಚ್ಚಿಸುವ ಮೂಲಕ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಕೊರಾನಾದಿಂದ ತೀವ್ರ ತೊಂದರೆಯಲ್ಲಿರುವ ಜನರ ಹಿತಕಾಪಾಡುವ ಬದಲು ಅವರಿಗೆ ಆರ್ಥಿಕ ಹೊರೆಹಾಕುತ್ತಿರುವುದು ಜನವಿರೋಧಿ ನೀತಿ ಎಂದು ಆರೋಪಿಸಿದರು.

ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಮಾತನಾಡಿ, ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡು ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಜನತೆಗೆ ತಮ್ಮ ತಪ್ಪಿನ ಅರಿವು ಆಗುತ್ತಿದೆ. ಈಡೀ ದೇಶದ ಪರಿಸ್ಥಿತಿ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದರು.

ಕುಕನೂರು ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಹನಮಂತಗೌಡ ಪಾಟೀಲ್, ರಾಮಣ್ಣ ಸಾಲಭಾವಿ,ಬಿ,ಎಂ.ಶಿರೂರು, ಕೆರಿಬಸಪ್ಪ ನಿಡಗುಂದಿ, ರಾಘವೇಂದ್ರಾಚಾರ ಜೋಶಿ, ಮಹೇಶ ಹಳ್ಳಿ, ಅಶೋಕ ತೋಟದ, ಸಂಗಣ್ಣ ಟೆಂಗಿನಕಾಯಿ, ರೇವಣಪ್ಪ ಸಂಗಟಿ, ಬಸವರಾಜ ಕುಡಗುಂಟಿ, ಎಂ,ಎಫ್.ನದಾಫ್, ಶರಣಪ್ಪ ಗಾಂಜಿ, ಸುಧೀರ ಕೊರ್ಲಳ್ಳಿ, ಮಲ್ಲಿಕಾರ್ಜುನ ಜಕ್ಕಲಿ, ಸಂಗಪ್ಪ ಕೊಪ್ಪಳ, ರಿಯಾಜ ಖಾಜಿ ಇದ್ದರು. ತಹಶೀಲ್ದಾರ ಶ್ರೀಶೈಲ ತಳವಾರ ಮನವಿ ಸ್ವೀಕರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.