ಯಲಬುರ್ಗಾ: ಯಲಬುರ್ಗಾ ಪಟ್ಟಣಕ್ಕೆ ನರ್ಸಿಂಗ್ ಕಾಲೇಜು ಮಂಜೂರಾಗಿದ್ದಕ್ಕೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಶಿಕ್ಷಣ ಪ್ರೇಮಿಗಳು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಪಾಲ್ಗೊಂಡಿದ್ದ ಹಿರಿಯ ಮುಖಂಡ ಬಿ.ಎಂ. ಶಿರೂರು ಮಾತನಾಡಿ, ಯಲಬುರ್ಗಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶೈಕ್ಷಣಿಕ ಕ್ರಾಂತಿಯಾಗಿದ್ದು, ಪ್ರತಿಯೊಂದು ಕೋರ್ಸ್ಗಳು ತಾಲ್ಲೂಕಿನಲ್ಲಿ ಲಭ್ಯವಾಗಿವೆ. ವಿಶೇಷವಾಗಿ ವಸತಿಶಾಲೆಗಳು ರಾಜ್ಯದಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರದಲ್ಲಿವೆ’ ಎಂದರು.

ಶೇಖರಗೌಡ ಉಳ್ಳಾಗಡ್ಡಿ ಮಾತನಾಡಿದರು.

ಕಾರ್ಯಾಧ್ಯಕ್ಷ ಆನಂದ ಉಳ್ಳಾಗಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ ಕೋರ್ಲಳ್ಳಿ, ಶರಣಪ್ಪ ಗಾಂಜಿ, ಕಾಂಗ್ರೆಸ್ ಕಾರ್ಯಾಧ್ಯಕ್ಷ ಶಿವನಗೌಡ ದಾನರಡ್ಡಿ, ಜಿಪಂ ಮಾಜಿ ಸದಸ್ಯ ಈರಪ್ಪ ಕುಡಗುಂಟಿ, ರಸೂಲ್ಸಾಬ ದಮ್ಮೂರು, ಛತ್ರಪ್ಪ ಮುಧೋಳ ಸೇರಿ ಅನೇಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.