ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್‌ನಿಂದ ದಲಿತರಿಗೆ ನಿರಂತರ ಅನ್ಯಾಯ: ಆರೋಪ

Published 15 ಏಪ್ರಿಲ್ 2024, 16:16 IST
Last Updated 15 ಏಪ್ರಿಲ್ 2024, 16:16 IST
ಅಕ್ಷರ ಗಾತ್ರ

ಕೊಪ್ಪಳ: ‘ಕಾಂಗ್ರೆಸ್​ ಪಕ್ಷ ನಿರಂತರವಾಗಿ ದಲಿತರಿಗೆ ಅನ್ಯಾಯ ಮಾಡುತ್ತಲೇ ಬಂದಿದ್ದು, ಮೊದಲಿನಿಂದಲೂ ‌ಬಿಜೆಪಿ ದಲಿತರ ಧ್ವನಿಯಾಗಿ ಕೆಲಸ ಮಾಡುತ್ತಿದೆ’ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಹೊರತಟ್ನಾಳ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾದರೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಬರಗಾಲದ ಸಂಕಷ್ಟದ ಪರಿಸ್ಥಿತಿ ಇದ್ದರೂ ರೈತರಿಗೆ ಸ್ಪಂದಿಸಿಲ್ಲ’ ಎಂದು ಆರೋಪಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಅವರ ಅವಧಿಯಲ್ಲಿ ಪರಿಶಿಷ್ಟ ಸಮುದಾಯದ ಜನರಿಗೆ ಅನೇಕ ಸವಲತ್ತುಗಳನ್ನು ಒದಗಿಸಲಾಗಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೂ‌ ಹೇರಳ ಸೌಲಭ್ಯ ಲಭಿಸಿವೆ.
ಮೋದಿ ಪ್ರಧಾನಿಯಾದ ಬಳಿಕ ದೇಶದ ಅಭಿವೃದ್ಧಿ ಪಥದತ್ತ ಸಾಗುತ್ತಿದೆ’ ಎಂದು ಹೇಳಿದರು.

‘ಪರಿಶಿಷ್ಟ ಸಮುದಾಯಗಳಿಗೆ ಆರ್ಥಿಕ, ಔದ್ಯೋಗಿಕ, ರಾಜಕೀಯ ಶಕ್ತಿ ಕೊಡುವ ಪ್ರಾಮಾಣಿಕ ಪ್ರಯತ್ನವನ್ನು‌ ನಮ್ಮ ಪಕ್ಷ ಮಾಡಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಫಲ ನೀಡುತ್ತಿಲ್ಲ. ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಸಿಗುವುದಿಲ್ಲ ಎನ್ನುವುದು ಜನರಿಗೆ ಮನವರಿಕೆಯಾಗಿದೆ’ ಎಂದು ಹೇಳಿದರು.

‘ಕಾಂಗ್ರೆಸ್‌ನವರು ಕೇವಲ ಬಾಯಲ್ಲಿ ಅಂಬೇಡ್ಕರ್​ ಹೆಸರು ಹೇಳುತ್ತಾರೆ. ಅಂಬೇಡ್ಕರ್​ ಅವರಿಗೆ ಅನ್ಯಾಯ ಮಾಡಿದ್ದು ಇದೇ ಕಾಂಗ್ರೆಸ್​ ಪಕ್ಷ. ಸಂವಿಧಾನಕ್ಕೆ ಅನೇಕ ತಿದ್ದುಪಡಿ, ತುರ್ತು ಪರಿಸ್ಥಿತಿ ಹೇರಿಕೆ, ಅಂಬೇಡ್ಕರ್​ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಇವರೇ ಎಂಬುದು ಜನತೆಗೆ ಗೊತ್ತಿದೆ’ ಎಂದರು.

ಜಿಲ್ಲಾ ಮಾಧ್ಯಮ ವಕ್ತಾರ ಸೋಮನಗೌಡ, ಮಂಜುನಾಥ ಮುಸಲಾಪುರ, ಅಮಿತ್​ ಕಂಪ್ಲಿಕರ್​ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT