ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನರೇಗಾ ಯೋಜನೆ ಸದ್ಬಳಕೆಗೆ ಸಹಕರಿಸಿ: ವಿ.ಎಚ್‌.ನಿಂಗನಗೌಡ

ತಾಪಂ ಸಹಾಯಕ ನಿರ್ದೇಶಕ ನಿಂಗನಗೌಡ ಮನವಿ
Published : 20 ಸೆಪ್ಟೆಂಬರ್ 2024, 14:27 IST
Last Updated : 20 ಸೆಪ್ಟೆಂಬರ್ 2024, 14:27 IST
ಫಾಲೋ ಮಾಡಿ
Comments

ಕುಷ್ಟಗಿ: ಹೊಲಗದ್ದೆಗಳು ಮತ್ತಿತರೆ ಸ್ಥಳಗಳಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳುವುದಕ್ಕೆ ನರೇಗಾದಲ್ಲಿ ಅವಕಾಶವಿದ್ದು ಸದುಪಯೋಗಪಡಿಸಿಕೊಳ್ಳಲು ತಾಲ್ಲೂಕು ಪಂಚಾಯಿತಿ ನರೇಗಾ ಸಹಾಯಕ ನಿರ್ದೇಶಕ ವಿ.ಎಚ್‌.ನಿಂಗನಗೌಡ ಹೇಳಿದರು.

ತಾಲ್ಲೂಕಿನ ಬಿಜಕಲ್ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ನರೇಗಾ ಮಾಹಿತಿ ಕಾರ್ಯಾಗಾರದಲ್ಲಿ ನೋಂದಾಯಿತ ಕೂಲಿಕಾರರಿಗೆ ನರೇಗಾ ಯೋಜನೆಯಲ್ಲಿನ ವೈಯಕ್ತಿಕ ಕಾಮಗಾರಿಗಳಿಗೆ ಸಂಬಂಧಿಸಿದ ಆದೇಶ ಪ್ರತಿಗಳ ವಿತರಣೆ ಅಭಿಯಾನದಲ್ಲಿ ಮಾತನಾಡಿದ ಅವರು, ‘ಸಾರ್ವಜನಿಕರು ನಿಯಮಗಳ ಅನುಸಾರ ಕೆಲಸಗಳನ್ನು ಕೈಗೊಂಡಿದ್ದರೆ ಮಾತ್ರ ಕೂಲಿಹಣ ಪಾವತಿಯಾಗುತ್ತದೆ. ಯೋಜನೆ ದುರ್ಬಳಕೆಯಾಗದಂತೆ ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಎಂಜಿನಿಯರ್‌ಗಳು ಸೂಕ್ತ ನಿಗಾ ವಹಿಸಬೇಕು’ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆನಂದರಾವ್ ಕುಲಕರ್ಣಿ, ತಾಲ್ಲೂಕು ಪಂಚಾಯಿತಿ ಐಇಸಿ ಸಂಯೋಜಕ ಚಂದ್ರಶೇಖರ ಹಿರೇಮಠ, ಹನುಮಂತ, ಸ್ವಾತಿ, ಸ್ವಸಹಾಯ ಸಂಘದ ಸದಸ್ಯರು, ಸಾರ್ವಜನಿಕರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT