ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಷ್ಠರೋಗ ನಿಯಂತ್ರಣಕ್ಕೆ ಸಹಕಾರ ಅಗತ್ಯ: ಡಾ.ಕೃಷ್ಣಾ ಹೊಟ್ಟಿ

Published 28 ಡಿಸೆಂಬರ್ 2023, 15:34 IST
Last Updated 28 ಡಿಸೆಂಬರ್ 2023, 15:34 IST
ಅಕ್ಷರ ಗಾತ್ರ

ಯಲಬುರ್ಗಾ: ಕುಷ್ಠರೋಗ ಮುಕ್ತ ದೇಶವನ್ನಾಗಿ ಮಾಡಲು ಹೊರಟಿರುವ ಸರ್ಕಾರದ ಅಭಿಯಾನಕ್ಕೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಸ್ಥಳೀಯ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕೃಷ್ಣಾ ಹೊಟ್ಟಿ ಹೇಳಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿದ್ದ ಕುಷ್ಠರೋಗ ಪತ್ತೆ ಅಭಿಯಾನಕ್ಕೆ ಚಾಲನೆ ನೀಡಿ  ಅವರು ಮಾತನಾಡಿದರು.

‘ಪ್ರಾಚೀನ ಕಾಲದಿಂದ ಬಂದಿರುವ ಕುಷ್ಠರೋಗವನ್ನು ಗುಣಪಡಿಸಲು ಸಾಧ್ಯವಿದೆ. ಈ ರೋಗದ ಬಗ್ಗೆ ಅನೇಕ ತಪ್ಪು ಕಲ್ಪನೆಗಳಿವೆ. ಸೂಕ್ತ ರೀತಿಯಲ್ಲಿ ಚಿಕಿತ್ಸೆ ಪಡೆದರೆ ರೋಗವನ್ನು ಗುಣಪಡಿಬಹುದಾಗಿದೆ. ಈ ಕಾಯಿಲೆಯಿಂದ ಬಳಲುತ್ತಿರುವವರು ಯಾವುದೇ ಸಂಕೋಚವಿಲ್ಲದೇ ಚಿಕಿತ್ಸೆ ಪಡೆಯಲು ಮುಂದೆಬರಬೇಕು. ದೇಶದಲ್ಲಿ ಈ ಕಾಯಿಲೆಯನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸರ್ಕಾರ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ’ ಎಂದರು.

ಆರೋಗ್ಯ ರಕ್ಷ ಸಮಿತಿ ಸದಸ್ಯ ಪ್ರಕಾಶ ಛಲವಾದಿ ಮಾತನಾಡಿದರು. ಕುಷ್ಠರೋಗ ನಿರ್ಮೂಲನಾ ತಾಲ್ಲೂಕು ಮೇಲ್ವಿಚಾರಕ ರಾಜಶೇಖರ ಪ್ರಾಸ್ತವಿಕವಾಗಿ ಮಾತನಾಡಿದರು. ಸಹಾಯಕ ಆಡಳಿತಾಧಿಕಾರಿ ಚಂದ್ರಶೇಖರ ಅಣ್ಣಿಗೇರಿ, ಸಮಾಲೋಚಕ ಶರಣಪ್ಪ ಉಪ್ಪಾರ, ಆರೋಗ್ಯ ಸಹಾಯಕಿರಾದ ಶ್ರೀದೇವಿ, ಶಿಲ್ಪಾ ಭಜಂತ್ರಿ, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT