ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕನೂರು: ಸಹಕಾರ ಸಂಘಗಳು ರೈತರ ಜೀವನಾಡಿ- ಗೌರಾ ಬಸವರಾಜ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಹೇಳಿಕೆ
Last Updated 20 ಡಿಸೆಂಬರ್ 2021, 13:12 IST
ಅಕ್ಷರ ಗಾತ್ರ

ಕುಕನೂರು: ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ’ ಎಂದು ಸಂಘದ ನಿರ್ದೇಶಕ ಗೌರಾ ಬಸವರಾಜ ಹೇಳಿದರು.

ತಾಲ್ಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ಶನಿವಾರ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.

ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಗ್ರಾಮೀಣ ಪ್ರದೇಶದ ಜನರಿಗೆ ತುಂಬಾ ಅನುಕೂಲವಾಗಿದೆ. ಸಾಲ ಪಡೆದುಕೊಂಡು ಕೃಷಿ ಚಟುವಟಿಕೆಗೆ ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬಹುದು ಎಂದರು.

ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ರೈತರು ಅದನ್ನೇ ಅವಲಂಬಿಸಿದ್ದಾರೆ. ಸರ್ಕಾರ ಕೂಡ ಅವರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ. ಇದನ್ನು ಸಂಪೂರ್ಣವಾಗಿ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಹಕಾರ ಸಂಘ ತಾಲ್ಲೂಕಿನಲ್ಲಿಯೇ ಅತ್ಯುತ್ತಮ ನಿವ್ವಳ ಲಾಭ ಹೊಂದಿದ್ದು, ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಿ ಷೇರುದಾರರಿಗೆ ಸಹಕಾರಿಯಾಗಿದೆ ಎಂದರು.

ರೈತ ಮುಖಂಡ ಪ್ರಭು ಆಚಾರ್ ಮಾತನಾಡಿ,‘ರೈತರು ಖಾಸಗಿ ವ್ಯಕ್ತಿಗಳಿಂದ ಹೆಚ್ಚಿನ ಬಡ್ಡಿ ದರದಲ್ಲಿ ಯಾವುದೇ ಕಾರಣಕ್ಕೂ ಸಾಲ ಪಡೆದುಕೊಳ್ಳಬಾರದು. ಇದಲ್ಲದೇ ಸಾಲಕ್ಕೆ ಹೆದರಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಬಾರದು’ ಎಂದು ಹೇಳಿದರು.

ಸಂಘದಿಂದ ಸಾಲ ಪಡೆದುಕೊಂಡು ಹೈನುಗಾರಿಕೆ ಹಾಗೂ ನೀರಾವರಿ ಸೇರಿದಂತೆ ಇನ್ನಿತರ ಚಟುವಟಿಕೆಗೆ ಹಣ ಬಳಸಿಕೊಳ್ಳಬೇಕು ಎಂದರು.

ರೈತರಿಗೆ ಸಾಕಷ್ಟು ಸೌಲಭ್ಯ ನೀಡಲಾಗುತ್ತದೆ. ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡರೆ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸಂಘದ ಅಧ್ಯಕ್ಷ ಪ್ರಭುಗೌಡ ಪಾಟೀಲ, ಉಪಾಧ್ಯಕ್ಷ ಮಲ್ಲಪ್ಪ ಸುಳ್ಳದ್, ಶ್ರೀಧರ ಕುಲಕರ್ಣಿ, ರಾಘವೇಂದ್ರ ದೇಸಾಯಿ. ಕಾರ್ಯದರ್ಶಿ ಶರಣಪ್ಪ ದೇವರಮನಿ ಹಾಗೂ ಸಂಘದ ಸರ್ವ ನಿರ್ದೇಶಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT