ಶುಕ್ರವಾರ, ಮೇ 14, 2021
21 °C
ಯಲಬುರ್ಗಾ: ನಿಗದಿತ ಸಮಯ ಮೀರಿ ವ್ಯಾಪಾರ ಮಾಡುವ ವ್ಯಾಪಾರಿಗಳು

ಅಂಗಡಿ ಮುಚ್ಚಿಸಿದ ಪೌರಕಾರ್ಮಿಕರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಬುರ್ಗಾ: ದಿನದಿಂದ ದಿನಕ್ಕೆ ತೀವ್ರವಾಗಿ ಹರಡುತ್ತಿರುವ ಕೋವಿಡ್ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಪೌರ ಕಾರ್ಮಿಕರ ಸೇವೆ ಗಣನೀಯವಾಗಿದೆ. ಪಟ್ಟಣದ ಸ್ವಚ್ಛತಾ ಕಾರ್ಯ ನಿರ್ವಹಿಸುವುದರ ಜತೆಗೆ ವಿವಿಧ ಅಂಗಡಿ ಮುಂಗ್ಗಟ್ಟುಗಳನ್ನು ಬಂದ್ ಮಾಡದೇ ತೆರೆದು ವ್ಯಾಪಾರ ಮಾಡುವವರನ್ನು ಗುರುತಿಸಿ ಬಂದ್ ಮಾಡಿಸುವಲ್ಲಿಯೂ ಶ್ರಮಿಸುತ್ತಿದ್ದಾರೆ.

ಸರ್ಕಾರ ಲಾಕ್‍ಡೌನ್ ಘೋಷಿಸಿದ ಕಾರಣ ನಿಗದಿತ ಸಮಯ ಮೀರಿ ಕೆಲವರು ಅಂಗಡಿ ತೆರೆದುಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಅಲ್ಲದೆ, ಇದರಿಂದ ಗ್ರಾಹಕರು ಕೂಡ ವಿವಿಧ ಅಂಗಡಿಗಳಿಗೆ ಭೇಟಿ ನೀಡಿ ಸಾಮಗ್ರಿ ಖರೀದಿಸುವುದು ಸಾಮಾನ್ಯವಾಗಿದೆ. ಇಲ್ಲಿನ ಪಟ್ಟಣ ಪಂಚಾಯಿತಿಯವರು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವುದಕ್ಕಾಗಿ ಪೌರಕಾರ್ಮಿಕರನ್ನು ಅಂಗಡಿ ಮುಚ್ಚಿಸುವಂತೆ ಕಳುಹಿಸುತ್ತಿದ್ದಾರೆ. ಇದರಿಂದ ಪೌರ ಕಾರ್ಮಿಕರು ಅನಗತ್ಯವಾಗಿ ಎರಡೆರಡು ಕೆಲಸ ನಿರ್ವಹಿಸಬೇಕಾಗಿದೆ.

ಸಾರ್ವಜನಿಕರು ಹಾಗೂ ಕೆಲ ವ್ಯಾಪಾರಸ್ಥರು ಸರ್ಕಾರದ ಕೋವಿಡ್ ನಿಯಮಗಳನ್ನು ಪಾಲಿಸದೇ ಉದಾಸೀನ ಮಾಡುತ್ತಿರುವುದು ಅಧಿಕಾರಿಗಳ ಬೇಸರಕ್ಕೆ ಕಾರಣವಾಗಿದೆ. ಗ್ರಾಮೀಣ ಪ್ರದೇಶದಲ್ಲಿಯೂ ಕೋವಿಡ್ ಹರಡುವಿಕೆ ತೀವ್ರವಾಗುತ್ತಿರುವುದು ಆಂತಕಕ್ಕೆ ಎಡೆಮಾಡಿಕೊಟ್ಟಿದೆ.

ಸಂಜೆಯಾಗುತ್ತಿದ್ದಂತೆ ಅಲ್ಲಲ್ಲಿ ಗುಂಪು ಗುಂಪಾಗಿ ಸೇರುವವರ ಪ್ರಮಾಣ ಹೆಚ್ಚುತ್ತಿದೆ. ಮಾಸ್ಕ್ ಧರಿಸುವುದಾಗಲಿ, ಅಂತರ ಕಾಯ್ದುಕೊಳ್ಳುವುದಾಗಲಿ ಇಲ್ಲದೇ ಇರುವುದರಿಂದ ಯಾವುದೇ ಸಂದರ್ಭದಲ್ಲಿ ಕೊರೊನಾ ಸೋಂಕು ತಗಲುವ ಸಾಧ್ಯತೆ ಇದೆ ಎಂದು ಅನೇಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿ ಅನಗತ್ಯವಾಗಿ ತಿರುಗಾಡುವವರಿಗೆ ಹಾಗೂ ಅಲ್ಲಲ್ಲಿ ಗುಂಪು ಗುಂಪಾಗಿ ಸೇರುವ ಯುವಕರಿಗೆ ಬಿಸಿ ಮುಟ್ಟಿಸಬೇಕು ಎಂದು ಪ್ರಜ್ಞಾವಂತ ನಾಕರಿಕರು ಒತ್ತಾಯಿಸುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.