ಶುಕ್ರವಾರ, ಜೂನ್ 18, 2021
27 °C

ಕನಕಗಿರಿ: ಪೊಲೀಸರಿಂದ ಜಾಗೃತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ಕೊರೊನಾ ಲಾಕ್‌ಡೌನ್‌ಗೆ ಮೊದಲ ದಿನವಾದ ಸೋಮವಾರ ಪಟ್ಟಣದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಪೊಲೀಸ್ ಇಲಾಖೆ ಸಿಬ್ಬಂದಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜಾಗೃತಿ ಮೂಡಿಸಿದರು.

ವಾಲ್ಮೀಕಿ ವೃತ್ತ, ರಾಜಬೀದಿ ಒಳಗೊಂಡಂತೆ ವಿವಿಧ ರಸ್ತೆಗಳಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು. ಸಾಲದು ಎಂಬಂತೆ ವಾಹನಗಳನ್ನು ವಶಕ್ಕೆ ಪಡೆದು, ಸವಾರರಿಗೆ ದಂಡ ವಿಧಿಸಿದರು.

ನಸುಕಿನಿಂದಲೇ ವಾಹನದಲ್ಲಿ ಸಂಚರಿಸಿದ ಪಿಎಸ್ಐ ತಾರಾಬಾಯಿ ಪವಾರ, ಸಹಾಯಕ ಸಬ್ ಇನ್‌ಸ್ಪೆಕ್ಟರ್‌ ಜಾಫರದ್ದೀನ್ ಅವರು ಸರ್ಕಾರ ನಿಗದಿಪಡಿಸಿದ ಸಮಯಕ್ಕೆ ಅಂಗಡಿ ಬಂದ್ ಮಾಡಬೇಕು ಎಂದು ಸೂಚಿಸಿದರು.

ಮಧ್ಯಾಹ್ನ ಪಟ್ಟಣದ ಪ್ರಮುಖ ರಸ್ತೆಗಳು, ಬಸ್ ನಿಲ್ದಾಣ, ನೀರ್ಲೂಟಿ ರಸ್ತೆ, ಗಂಗಾವತಿ-ಲಿಂಗಸುಗೂರು ರಸ್ತೆ ಬಿಕೋ ಎನ್ನುತ್ತಿರುವುದು ಕಂಡುಬಂತು.

ಅಗತ್ಯ ವಸ್ತು ಖರೀದಿಸಲು ಅವಕಾಶ ನೀಡಿದ್ದರೂ ಜನ ಅಂತರ ಕಾಪಾಡಿಕೊಳ್ಳದೆ ಗುಂಪಾಗಿ ಸಾಮಗ್ರಿಗಳನ್ನು ಖರೀದಿಸುತ್ತಿರುವುದು ಕೆಲ ಕಡೆ ಕಂಡು ಬಂತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.