ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಿಯರ್ಸ್‌ ಕಾರ್ಯ ಶ್ಲಾಘನೀಯ

ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಮರೇಶ ಹುಬ್ಬಳ್ಳಿ ಹೇಳಿಕೆ
Last Updated 9 ಜೂನ್ 2021, 3:12 IST
ಅಕ್ಷರ ಗಾತ್ರ

ಯಲಬುರ್ಗಾ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕ ಹಾಗೂ ಸ್ಥಳೀಯ ಪಟ್ಟಣ ಪಂಚಾಯಿತಿ ವತಿಯಿಂದ ಕೋವಿಡ್ ವಾರಿಯರ್‌ಗಳಿಗೆ ಕಷಾಯದ ಪುಡಿ ಹಾಗೂ ಮಾಸ್ಕ್‌ ವಿತರಿಸಲಾಯಿತು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಮರೇಶ ಹುಬ್ಬಳ್ಳಿ ಮಾತನಾಡಿ,‘ಜೀವದ ಹಂಗು ತೊರೆದು ಕೊರೊನಾ ಸೋಂಕಿತರ ಬಳಿ ಹೋಗಿ ಯೋಗಕ್ಷೇಮ ವಿಚಾರಿಸುವ ಮತ್ತು ಸೋಂಕಿತರನ್ನು ಪತ್ತೆ ಮಾಡುವ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ’ ಎಂದರು.

ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸಿದ್ದಲಿಂಗಪ್ಪ ಶ್ಯಾಗೋಟಿ ಮಾತನಾಡಿ,‘ಕೋವಿಡ್ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಕಾರ್ಯಕರ್ತೆಯರು ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ. ಅವರಿಗಾಗಿಯೇ ಕಷಾಯದ ಪುಡಿ ಹಾಗೂ ಮಾಸ್ಕ್‌ಗಳನ್ನು ವಿತರಿಸಲಾಗುತ್ತಿದೆ’ ಎಂದು ಅಭಿಪ್ರಾಯಪಟ್ಟರು.

ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ವಸಂತ ಭಾವಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಮೌನೇಶ, ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ವಿ. ಧರಣಾ, ಗೌರವಾಧ್ಯಕ್ಷ ಶರಣಯ್ಯ ಸರಗಣಾಚಾರ, ಪತ್ತಿನ ಸಹಕಾರ ಸಂಘದ ಶಶಿಧರ ಮಾಲಿಪಾಟೀಲ, ಶರಣಪ್ಪ ಕೊಪ್ಪದ, ಲಲಿತಾ ನಾಯ್ಕರ್, ಮೆಹಬೂಬ ಬಾದಶನ, ಶ್ರೀಕಾಂತ ಮಾಸಗಟ್ಟಿ, ಮುರ್ತುಜಾಸಾಬ ಮುಜಾವರ, ಶಿವಕುಮಾರ ಮುತ್ತಾಳ, ಮಲ್ಲನಗೌಡ ಬನ್ನಿಮರದ ಹಾಗೂ ಸಂಗಪ್ಪ ಶ್ಯಾಗೋಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT