ಭಾನುವಾರ, ಜೂಲೈ 12, 2020
29 °C

ಕೊಪ್ಪಳ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಾಲ್ಲೂಕು ‌ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಗ್ರಾಮವನ್ನು ಸೀಲ್ ಡೌನ್ ಮಾಡಿರುವುದು

ಗಂಗಾವತಿ: ಕೊಪ್ಪಳ‌ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪ್ರಕರಣ ಬೆಳಕಿಗೆ ಬಂದಿದ್ದು, ತಾಲ್ಲೂಕಿನ ಚಿಕ್ಕಜಂತಕಲ್ ಗ್ರಾಮದ 28 ವರ್ಷದ ಮಹಿಳೆಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಮಹಿಳೆಯ ಪತಿ ಹಾಗೂ ಮಕ್ಕಳು ಸೇರಿ ಮನೆಯಲ್ಲಿದ್ದ ಐವರನ್ನು ಪ್ರಾಥಮಿಕ ಸಂಪರ್ಕಿತರು ಹಾಗೂ ಮಹಿಳೆಯ ಅಣ್ಣನ ಮನೆಯಲ್ಲಿದ್ದ ನಾಲ್ವರನ್ನು ದ್ವೀತಿಯ ಸಂಪರ್ಕಿತರೆಂದು ಪತ್ತೆಮಾಡಲಾಗಿದೆ.

ಇನ್ನು ಕೊರೊನಾ ಸೋಂಕಿತ ಮಹಿಳೆಯು ಗಂಗಾವತಿಯ ತಾಲ್ಲೂಕು ಆಸ್ಪತ್ರೆ ಹಾಗೂ ಔಷಧ ಅಂಗಡಿಗಳಿಗೆ ಭೇಟಿ ನೀಡಿರುವ ಕಾರಣ ಎಲ್ಲಾ‌ ಪ್ರಾಥಮಿಕ ಹಾಗೂ ದ್ವೀತಿಯ ಸಂಪರ್ಕಿತರನ್ನು ಜಿಲ್ಲಾಡಳಿತವು ಸಿಡಿಆರ್ ಮೂಲಕ ಪತ್ತೆ ಹಚ್ಚುತ್ತಿದೆ.

ಇನ್ನು ಈಗಾಗಲೇ ತಾಲ್ಲೂಕಿನ ಚಿಕ್ಕಜಂತಕಲ್‌ ಗ್ರಾಮಕ್ಕೆ ತಾಲ್ಲೂಕು ‌ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಗ್ರಾಮವನ್ನು ಸೀಲ್ ಡೌನ್ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು