ಗುರುವಾರ , ಡಿಸೆಂಬರ್ 8, 2022
18 °C

ಗಂಗಾವತಿ: ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಂಗಾವತಿ: ಗಾಂಧಿನಗರದ ವಡೆಯರ ಓಣಿಯ 18 ವರ್ಷದ ನಿವಾಸಿಯೊಬ್ಬರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಸೋಂಕಿತ ವ್ಯಕ್ತಿಯು ತಂದೆಯೊಂದಿಗೆ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದ. ಸೋಂಕಿತ ವ್ಯಕ್ತಿಯನ್ನು ಕೊಪ್ಪಳಕ್ಕೆ ಕರೆದೊಯ್ಯಲಾಗಿದೆ. ಅಲ್ಲಿ ಐಸೋಲೇಶನ್ ವಾರ್ಡ್‌ಗೆ ದಾಖಲಿಸಿ, ಚಿಕಿತ್ಸೆ ಕೊಡಲಾಗುತ್ತಿದೆ.

ಸೋಂಕಿತ ವ್ಯಕ್ತಿಯ ತಂದೆಗೆ ಮನೆಯಿಂದ ಹೊರಗೆ ಹೋಗದಂತೆ ನಿರ್ಬಂಧಿಸಲಾಗಿದೆ. ಇವರು ಗಂಗಾವತಿಯ 21ನೇ ವಾರ್ಡ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ಸೋಂಕು ಪತ್ತೆಯಾದ ಯುವಕನಿದ್ದ ಮನೆಯ ಸುತ್ತಲಿನ 100 ಮೀ ಸುತ್ತಳತೆಯಲ್ಲಿ ಸೀಲ್‌ಡೌನ್‌ ಮಾಡಲು ತಾಲ್ಲೂಕು ಆಡಳಿತ ನಿರ್ಧರಿಸಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸುವ ಸಾಧ್ಯತೆಯ ಬಗ್ಗೆಯೂ ಅಧಿಕಾರಿಗಳು ಚರ್ಚಿಸುತ್ತಿದ್ದಾರೆ.

ಸೋಂಕಿತ ಯುವಕ ತಮಿಳುನಾಡು ಮೂಲದ ಬಟ್ಟೆ ವ್ಯಾಪಾರಿಯಾಗಿದ್ದು, ಲಾಕಡೌನ್ ಸಂದಭದಲ್ಲಿ ಬೆಂಗಳೂರಿನಲ್ಲಿದ್ದ ಎನ್ನಲಾಗಿದೆ. ವಾರದ ಹಿಂದಷ್ಟೇ ಈತ ನಗರಕ್ಕೆ ಆಗಮಿಸಿದ್ದ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು