ಮಂಗಳವಾರ, ಅಕ್ಟೋಬರ್ 27, 2020
22 °C

ಕೋವಿಡ್‌-19: 4 ಸಾವು, 251 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಜಿಲ್ಲೆಯಲ್ಲಿ ಸೋಮವಾರ ಕೊರೊನಾ ಸೋಂಕಿನಿಂದ 4 ಜನರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಒಟ್ಟು ಸಾವಿನ ಸಂಖ್ಯೆ 186ಕ್ಕೆ ಏರಿಕೆಯಾಗಿದೆ.

251 ದೃಢ: ಸೋಮವಾರ 251 ಜನರಿಗೆ ಕೋವಿಡ್‌-19 ದೃಢಪಟ್ಟಿದ್ದು, ಈ ಪೈಕಿ ಗಂಗಾವತಿ-97, ಕೊಪ್ಪಳ-73, ಕುಷ್ಟಗಿ-39, ಯಲಬುರ್ಗಾದಲ್ಲಿ 42 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಇದರಿಂದಾಗಿ ಈವರೆಗೂ 8,172 ಪ್ರಕರಣಗಳು ವರದಿಯಾಗಿವೆ.

ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರ ಪತ್ತೆ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಎಸ್‌.ವಿಕಾಸ್‌ ಕಿಶೋರ್‌ ತಿಳಿದಿದ್ದಾರೆ. 

198 ಗುಣಮುಖ: 198 ಜನರು ಸೋಂಕಿನಿಂದ ಗುಣಮುಖರಾಗಿ ಕೋವಿಡ್‌-19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಈ ವರೆಗೂ 6,156 ಜನರು ಗುಣಮುಖರಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು