ಶುಕ್ರವಾರ, ಆಗಸ್ಟ್ 19, 2022
22 °C

ಕೊಪ್ಪಳ: 152 ಜನರಿಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಜಿಲ್ಲೆಯಲ್ಲಿ ಭಾನುವಾರ 4 ಜನರು ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

152 ಜನರಿಗೆ ಸೋಂಕು ಇರುವುದು ಪತ್ತೆ ಮಾಡಲಾಗಿದೆ. ಗಂಗಾವತಿ ತಾಲ್ಲೂಕಿನಲ್ಲಿ 50, ಕೊಪ್ಪಳದಲ್ಲಿ 40, ಕುಷ್ಟಗಿಯಲ್ಲಿ 39, ಯಲಬುರ್ಗಾದಲ್ಲಿ 23 ಪ್ರಕರಣ ಪತ್ತೆಯಾಗಿದೆ. 44 ಜನರನ್ನು ತೀವ್ರ ಸೋಂಕಿನ ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದೆ.

169 ಜನರು ಕೋವಿಡ್ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಒಟ್ಟು 9221 ಪ್ರಕರಣ ವರದಿಯಾಗಿದ್ದು, ಇಲ್ಲಿಯವರೆಗೆ 7226 ಜನರು ಗುಣಮುಖರಾಗಿದ್ದಾರೆ. ಸಾಮೂಹಿಕ ಕೋವಿಡ್‌ ಪರೀಕ್ಷೆ ಚುರುಕುಗೊಳಿಸಿದ್ದು, ಹೋಬಳಿಮಟ್ಟದಲ್ಲಿ ಸಂಚಾರಿ ವಾಹನಗಳು ಕಾರ್ಯ ನಿರ್ವಹಿಸುತ್ತವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು