ಶುಕ್ರವಾರ, ಆಗಸ್ಟ್ 19, 2022
25 °C

ಕೋವಿಡ್ 3 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್‌-19ಗೆ ಶುಕ್ರವಾರ 3 ಜನರು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ.

194 ಜನರಿಗೆ ಸೋಂಕು ಇರುವುದು ಪತ್ತೆ ಮಾಡಲಾಗಿದೆ. ಗಂಗಾವತಿ ತಾಲ್ಲೂಕಿನಲ್ಲಿ 87, ಕೊಪ್ಪಳದಲ್ಲಿ 44, ಕುಷ್ಟಗಿಯಲ್ಲಿ 33, ಯಲಬುರ್ಗಾದಲ್ಲಿ 30 ಪ್ರಕರಣ ಪತ್ತೆಯಾಗಿದೆ. 48 ಜನರನ್ನು ತೀವ್ರ ಸೋಂಕಿನ ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದೆ.

209 ಜನರು ಕೋವಿಡ್ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಒಟ್ಟು 8610 ಪ್ರಕರಣ ವರದಿಯಾಗಿದ್ದು, ಇಲ್ಲಿಯವರೆಗೆ 6448 ಜನರು ಗುಣಮುಖರಾಗಿದ್ದಾರೆ. ಸಾಮೂಹಿಕ ಕೋವಿಡ್‌-19 ಪರೀಕ್ಷೆ ಚುರುಕುಗೊಳಿಸಿದ್ದು, ಹೋಬಳಿಮಟ್ಟದಲ್ಲಿ ಸಂಚಾರಿ ವಾಹನಗಳು ಕಾರ್ಯ ನಿರ್ವಹಿಸುತ್ತವೆ. 

ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ  ಗುಣಮುಖ ಸಾವು

8,804  1,674      6,848     204

194     137         209        03

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು