ಬುಧವಾರ, ಜೂನ್ 23, 2021
28 °C
ಶಾಸಕ ಹಾಲಪ್ಪ ಆಚಾರ್ ಸೂಚನೆ

ಹೊರಗಿನಿಂದ ಬಂದವರಿಗೆ ಕ್ವಾರಂಟೈನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಸಬಹಂಚಿನಾಳ (ಕುಕನೂರು): ‘ಬೆಂಗಳೂರು ಸೇರಿ ಹೊರಜಿಲ್ಲೆ ಮತ್ತು ರಾಜ್ಯಗಳಿಂದ ಬರುವವರನ್ನು ರ‍್ಯಾಪಿಡ್ ಪರೀಕ್ಷೆಗೆ ಒಳಪಡಿಸಬೇಕು. ಕ್ವಾರಂಟೈನ್‍ ಮಾಡಬೇಕು’ ಎಂದು ಶಾಸಕ ಹಾಲಪ್ಪ ಆಚಾರ್ ತಿಳಿಸಿದರು.

ತಾಲ್ಲೂಕಿನ ಮಸಬಹಂಚಿನಾಳ ಗ್ರಾಮದ ಗೌರಮ್ಮ ಬಸಪ್ಪ ಆಚಾರ್ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಮಾದರಿ ಸಂಪರ್ಕ ತಡೆ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೊರೊನಾ ಸೋಂಕು ದೃಢಪಟ್ಟವರನ್ನು ಕ್ವಾರಂಟೈನ್ ಸೆಂಟರ್ ಅಥವಾ ಕೋವಿಡ್ ಆರೈಕೆ ಕೇಂದ್ರಕ್ಕೆ ಕಳುಹಿಸಲಾಗುವುದು. ನೆಗೆಟಿವ್ ವರದಿ ಬಂದವರನ್ನು ಅವರವರ ಮನೆಗಳಿಗೆ ಕಳುಹಿಸಲಾಗುವುದು ಎಂದರು.

ಜಿಲ್ಲೆಗೆ ಮರಳುವ ಜನರನ್ನು ಕ್ವಾರಾಂಟೈನ್‌ನಲ್ಲಿಡಬೇಕು. ಇಲ್ಲಿ ಇರಿಸಲಾಗುವ ಜನರಿಗೆ ಎಲ್ಲ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ತಿಳಿಸಿದರು. ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹ
ಣಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಆಯಾ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ತಹಶೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ ಮಾತನಾಡಿ,‘ಗ್ರಾಮ ಮಟ್ಟದಲ್ಲಿರುವ ಕಾರ್ಯಪಡೆ ಸಮಿತಿ ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಮುಂಜಾಗ್ರತಾ ಕ್ರಮಗಳಿಂದ ಕೋವಿಡ್ ಸರಪಳಿ ತುಂಡರಿಸಬೇಕು’ ಎಂದು ಅವರು ಸಲಹೆ ನೀಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ ಮಾತನಾಡಿ,‘ಈ ಗ್ರಾಮದಲ್ಲಿ ಪ್ರಾರಂಭಿಸಲಾದ ಮಾದರಿ ಸಂಪರ್ಕ ತಡೆ ಕೇಂದ್ರ ಜಿಲ್ಲೆಯಲ್ಲಿಯೇ ಮಾದರಿಯಾಗಿದ್ದು, ಪೌಷ್ಟಿಕ ಆಹಾರ, ಬೆಡ್ ವ್ಯವಸ್ಥೆ, ಉತ್ತಮವಾದ ವಾತಾವರಣ, ಟಿ.ವಿ, ಸುವ್ಯವಸ್ಥಿತವಾದ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ’ ಎಂದರು.

ಪಿಡಿಒ ಮಹೇಶ, ವೈದ್ಯ ಪ್ರಕಾಶ್ ಸಜ್ಜನ್, ಮುಖ್ಯಶಿಕ್ಷಕ ರಾಮಣ್ಣ ತಳವಾರ, ಲಿಂಗರಾಜ, ನೋಡಲ್ ಅಧಿಕಾರಿ ಸುರೇಶ ಹಾಗೂ ಮಾದೇವಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು