ಮಂಗಳವಾರ, ಜೂನ್ 28, 2022
27 °C

ಕೋವಿಡ್ ಲಸಿಕಾ ಕೇಂದ್ರ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ‘ಮುಂಚೂಣಿ ಕಾರ್ಯಕರ್ತರಿಗೆ ಕೋವಿಶೀಲ್ಡ್‌ ಲಸಿಕೆ ನೀಡಲು ಕೇಂದ್ರ ಆರಂಭಿಸಲಾಗಿದೆ’ ಎಂದು ನೋಡಲ್ ಅಧಿಕಾರಿ ಹಾಗೂ ಪ್ರೊಬೇಷನರಿ ಉಪ ವಿಭಾಗಾಧಿಕಾರಿ ರಜನೀಕಾಂತ ತಿಳಿಸಿದರು.

ಪಟ್ಟಣದ ಎಪಿಎಂಸಿ ಕಚೇರಿ ಆವರಣದಲ್ಲಿ ಶುಕ್ರವಾರ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.

18 ರಿಂದ 44 ವಯಸ್ಸಿನವರಿಗೆ ಲಸಿಕೆ ಹಾಕಲಾಗುತ್ತಿದೆ. ಗಂಜ್, ಬಜಾರ್‌ ಹಮಾಲರು, ಕಿರಾಣಿ ಅಂಗಡಿ ಮಾಲೀಕರು, ಕಟ್ಟಡ ಕಾರ್ಮಿಕರು, ಹಣ್ಣು, ತರಕಾರಿ ಅಂಗಡಿ ಮಾಲೀಕರು, ಔಷಧಿ ಅಂಗಡಿಯವರು, ಅಂಗವಿಕಲರು, ನ್ಯಾಯ ಬೆಲೆ ಅಂಗಡಿಯವರು ಇತರರಿಗೆ ಈ ಲಸಿಕೆ ಹಾಕಲಾಗುತ್ತಿದೆ. ಮುಂಚೂಣಿ ಕಾರ್ಯಕರ್ತರು ಭಯ ಪಡದೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಹೇಳಿದರು.

ಶಾಸಕ ಬಸವರಾಜ ದಢೇಸೂಗೂರು ಅವರು ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ನಂತರ ಮಾತನಾಡಿದ ಅವರು,‘ಸಾರ್ವಜನಿಕರು ಕೊರೊನಾ ಕುರಿತು ಭಯ ಪಡದೆ ಎಚ್ಚರಿಕೆ ವಹಿಸಬೇಕು. ಅನಗತ್ಯವಾಗಿ ಹೊರಗಡೆ ತಿರುಗಾಡಬಾರದು’ ಎಂದರು.

ತಹಶೀಲ್ದಾರ್ ರವಿ ಅಂಗಡಿ ಮಾತನಾಡಿ,‘ತಾಲ್ಲೂಕಿನಲ್ಲಿ ಲಸಿಕೆ ಕೊರತೆ ಇಲ್ಲ. ಕೆಲ ದಿನಗಳ ನಂತರ ಸಾರ್ವಜನಿಕರಿಗೂ ಲಸಿಕೆ ಹಾಕಲಾಗುವುದು’ ಎಂದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿರುಮಲಮ್ಮ, ದಲ್ಲಾಳಿ ವರ್ತಕರ ಸಂಘದ ಮಹಾಂತೇಶ ಸಜ್ಜನ್ ಹಾಗೂ ವರ್ತಕ ಹನುಮೇಶ ಯಲಬುರ್ಗಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.