ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುನಿರಾಬಾದ್: ಕೋವಿಡ್ ಆರೈಕೆ ಕೇಂದ್ರ ಆರಂಭ

Last Updated 13 ಮೇ 2021, 5:25 IST
ಅಕ್ಷರ ಗಾತ್ರ

ಮುನಿರಾಬಾದ್: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಂದು ವಾರ್ಡ್ ಅನ್ನು ಕೋವಿಡ್‌ ಸೋಂಕಿತರ ಆರೈಕೆಗೆ ಮೀಸಲಿಡಲಾಗಿದೆ. ಭಾನುವಾರದಿಂದ ಚಿಕಿತ್ಸೆ ನೀಡಲಾಗುತ್ತಿದೆ.

ಇಪ್ಪತ್ತು ಆಮ್ಲಜನಕ ಸಹಿತ ಹಾಸಿಗೆಗಳನ್ನು ಹೊಂದಿರುವ ಪ್ರತ್ಯೇಕ ವಾರ್ಡ್ ಅನ್ನು ಆರೈಕೆ ಕೇಂದ್ರಕ್ಕೆ ಮೀಸಲಿರಿಸಲಾಗಿದೆ.

ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿರುವ ಸೋಂಕಿತರಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೂರು ದಿನಗಳಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

ಶಂಕಿತ ಮತ್ತು ಕಡಿಮೆ ತೀವ್ರತೆಯ ರೋಗ ಲಕ್ಷಣಗಳನ್ನು ಹೊಂದಿರುವವರಿಗೆ ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿರುವಂತೆ ಸಲಹೆ ನೀಡಲಾಗಿದೆ.

ತೀವ್ರ ರೋಗ ಲಕ್ಷಣ ಹಾಗೂ ಉಸಿರಾಟದ ತೊಂದರೆ ಇರುವವರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.

45 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಗೆ ಲಸಿಕೆ ಹಾಕುವ ಕಾರ್ಯ ಮುಂದುವರಿದಿದೆ. ಸರ್ಕಾರಿ ಪ್ರೌಢಶಾಲೆ ಕೊಠಡಿಯನ್ನು ಲಸಿಕಾ ಕೇಂದ್ರವನ್ನಾಗಿ ಮಾರ್ಪಡಿಸಲಾಗಿದೆ.

‘ಕೋವಿಡ್ ಆರೈಕೆ ಕೇಂದ್ರ ಪ್ರತ್ಯೇಕವಾಗಿದೆ. ಹೆರಿಗೆ ಸೇರಿದಂತೆ ಸಾಮಾನ್ಯ ರೋಗಗಳಿಗೆ ಎಂದಿನಂತೆ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮಾಂಜನಿ ‘ಪ್ರಜಾವಾಣಿ’ ಗೆ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT