ಗಂಗಾವತಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಜಾಗೃತರಾಗಬೇಕು. ಕೊರೊನಾ ವೈರಸ್ನ ಲಕ್ಷಣಗಳು ಕಂಡುಬಂದರೆ ಕೂಡಲೇ ಸ್ವಯಂ ಪ್ರೇರಿತರಾಗಿ ತಪಾಸಣೆಗೆ ಒಳಗಾಗಬೇಕು ಎಂದು ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಹೇಳಿದರು.

ನಗರದ ಮಂಥನ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲಾಡಳಿತದ ವತಿಯಿಂದ ಕೋವಿಡ್-19 ಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಯಾವುದೇ ಭಯಪಡದೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಿ ಎಂದು ಅವರು ಹೇಳಿದರು.

ಅಧಿಕಾರಿಗಳು ನಿಮ್ಮ ಬಳಿ ಬಂದಾಗ ಪ್ರಾಥಮಿಕ, ದ್ವಿತೀಯ ಸಂಪರ್ಕಿತರ ಮಾಹಿತಿಯನ್ನು ಸರಿಯಾಗಿ ಕೊಡಬೇಕು ಎಂದರು.

ಅಧಿಕಾರಿಗಳು ಕೋವಿಡ್ ವಿಚಾರದಲ್ಲಿ ನಿರ್ಲಕ್ಷ್ಯ ತೋರಬಾರದು. ಒಗ್ಗಟ್ಟಿನಿಂದ ಪ್ರತಿಯೊಬ್ಬರು ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದು. ಜೊತೆಗೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ತಾಲ್ಲೂಕಿನಲ್ಲಿ ಹೆಲ್ಪ್ಡೆಸ್ಕ್ಗಳ ಸಂಖ್ಯೆ ಹೆಚ್ಚಿಸಲಾಗುವುದು ಎಂದು ಹೇಳಿದರು.

ಲಾಕ್ಡೌನ್ಗೆ ಮನವಿ: ಸಭೆಯಲ್ಲಿ ಭಾಗವಹಿಸಿದ್ದ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ತಾಲ್ಲೂಕಿನಲ್ಲಿ ಕೊರೊನಾ ನಿಯಂತ್ರಣಕ್ಕೆ 10 ರಿಂದ 15 ದಿನ ಜಿಲ್ಲೆಯನ್ನು ಸಂಪೂರ್ಣ ಲಾಕ್ಡೌನ್ ಮಾಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಜಿಲ್ಲಾ ಪಂಚಾಯಿತಿ ಸಿಇಒ ರಘುನಂದನಮೂರ್ತಿ, ಜಿಲ್ಲಾ ನಗರಾಭಿವೃದ್ಧಿ ಯೋಜನಾಧಿಕಾರಿ ಸಿದ್ರಾಮೇಶ್ವರ, ತಹಶೀಲ್ದಾರ್ಗಳಾದ ಎಲ್.ಡಿ.ಚಂದ್ರಕಾಂತ್, ರವಿ ಅಂಗಡಿ, ಕವಿತಾ, ತಾಲ್ಲೂಕು ಪಂಚಾಯಿತಿ ಇಒ ಡಿ.ಮೋಹನ್, ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್, ಬಿಇಒ ಸೋಮಶೇಖರಗೌಡ, ನಗರಸಭೆ ಪೌರಾಯುಕ್ತ ಶೇಖರಪ್ಪ ಈಳಿಗೇರ, ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಈಶ್ವರ ಸವಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.