ಕೊಪ್ಪಳ: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿಕ್ಷಕರನ್ನು ಕೊರೊನಾ ಮುಂಚೂಣಿ ಕಾರ್ಯಕರ್ತರು ಎಂದು ಘೋಷಣೆ ಮಾಡಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ಉಚಿತವಾಗಿ ಲಸಿಕೆ ನೀಡುವಂತೆ ಸೂಚನೆ ನೀಡಿದ್ದು, ಜೂ.19 ರಂದು ಬೃಹತ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ.ನಮೋಶಿ ತಿಳಿಸಿದ್ದಾರೆ.

ಅಂದು ಕಿನ್ನಾಳ ರಸ್ತೆಯಲ್ಲಿರುವಸರ್ಕಾರಿ ನೌಕರರ ಭವನದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 4ರವರೆಗೆ ಲಸಿಕೆ ಹಾಕಲಾಗುತ್ತದೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ಶಿಕ್ಷಕರು ಹಾಗೂ ಉಪನ್ಯಾಸಕರು ಲಸಿಕಾ ಅಭಿಯಾನದ ಪ್ರಯೋಜನ ಪಡೆಯಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಶಿಕ್ಷಕರುಸರ್ಕಾರದಅನೇಕ ಕೆಲಸಗಳಲ್ಲಿ ತೊಡಗುತ್ತಿದ್ದು, ಅವರ ಮನವಿಯನ್ನು ಪರಿಗಣಿಸಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರಪಾಲಿಕೆ ಮತ್ತು ಶಿಕ್ಷಣ ಇಲಾಖೆ,ಈಶಾನ್ಯ ಕರ್ನಾಟಕ ಶಿಕ್ಷಕರ ಸಂಘನೆಗಳ ನೇತೃತ್ವದಲ್ಲಿ 18 ವರ್ಷದಿಂದ 44 ವಯಸ್ಸಿನ ಹಾಗೂ 45ವರ್ಷ ಮೇಲ್ಪಟ್ಟವರಿಗೆ ಮೊದಲನೇ ಡೋಸ್ ನೀಡಲಾಗುತ್ತಿದೆ. ಶಿಬಿರಕ್ಕೆ ಬರುವಾಗ ಕಡ್ಡಾಯವಾಗಿ ಆಧಾರ್ ಕಾರ್ಡ್, ತಮ್ಮ ಶಿಕ್ಷಣ ಸಂಸ್ಥೆ ನೀಡಿದ ಗುರುತಿನ ಚೀಟಿ ತರಬೇಕು ಎಂದು ಹೇಳಿದ್ದಾರೆ.

ಈ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಉದ್ಘಾಟಿಸಲಿದ್ದು, ಸಂಸದ ಸಂಗಣ್ಣ ಕರಡಿ ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.