ಸೋಮವಾರ, ಆಗಸ್ಟ್ 15, 2022
23 °C

ಕೊಪ್ಪಳ: ಕೋವಿಡ್​​ ಸೋಂಕಿತ ಯುವಕ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Suicide

ಕೊಪ್ಪಳ: ಕೋವಿಡ್‌ ಸೋಂಕಿತ ಯುವಕನೊಬ್ಬ ಜಿಲ್ಲಾ ಕೋವಿಡ್ ಆಸ್ಪತ್ರೆಯ ಶೌಚಾಲಯದಲ್ಲಿ ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತ ಯುವಕನನ್ನು 26 ವರ್ಷದ ಕುಕನೂರು ತಾಲ್ಲೂಕಿನ ಚಿಕ್ಕಬಿಡನಾಳ ಗ್ರಾಮದವರು ಎನ್ನಲಾಗಿದೆ.

ಅವರು ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸುತ್ತಿದ್ದರು. ಗುರುವಾರ ಮನೆಯವರ ಜತೆ ಮಾತನಾಡಿ, ಆರೋಗ್ಯದಿಂದ ಇರುವುದಾಗಿ ತಿಳಿಸಿದ್ದಾರೆ. ಶೀಘ್ರ ಗುಣಮುಖನಾಗುವುದಾಗಿಯೂ ಹೇಳಿದ್ದರು. ಆಸ್ಪತ್ರೆಯ ವೈದ್ಯರು ಕೂಡಾ ಚೆನ್ನಾಗಿದ್ದಾರೆ ಎಂದು ಹೇಳಿದ್ದರು. ಈಗ ಹೀಗೆ ಆಗಿದೆ ಎಂದು ಕುಟುಂಬದ ಸದಸ್ಯರು ಅಳಲು ತೋಡಿಕೊಂಡರು.

ರಾತ್ರಿ ವೇಳೆ ಶೌಚಾಲಯಕ್ಕೆ ತೆರಳಿದವರು ತಿರುಗಿ ಬಂದಿಲ್ಲ. ಇದನ್ನು ಸಿಬ್ಬಂದಿ ಕೂಡಾ ಗಮನಿಸಬೇಕಿತ್ತು. ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮೃತ ಯುವಕನ ಸಂಬಂಧಿಕರು ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು