ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ

Last Updated 16 ಫೆಬ್ರುವರಿ 2021, 12:10 IST
ಅಕ್ಷರ ಗಾತ್ರ

ಗಂಗಾವತಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಭಾರತ ಕಮ್ಯುನಿಷ್ಟ್‌ ಪಕ್ಷದ (ಮಾಕ್ಸ್‌ವಾದ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಂಘಟನೆ ಕಾರ್ಯದರ್ಶಿ ನಿರುಪಾದಿ ಬೆಣಕಲ್‌ ಮಾತನಾಡಿ,‘ಈಚೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿವೆ. ಅಗತ್ಯ ವಸ್ತುಗಳಾದ ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಬೆಲೆ ಏರಿಕೆ ಮಾಡಿವೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ರಾಷ್ಟ್ರಪತಿಗಳು ಜನ ಸಾಮ್ಯಾನರ ಮೇಲೆ ಕೇಂದ್ರ ನಡೆಸುತ್ತಿರುವ ದೌರ್ಜನ್ಯವನ್ನು ತಡೆಯಬೇಕು’ ಎಂದು ಮನವಿ ಮಾಡಿದರು.

ಸಂಘಟನೆಯ ಪ್ರಮುಖರಾದ ಅಮರೇಶ ಕಡಗದ, ಶರಣಪ್ಪ, ಮಂಜುನಾಥ ಡಗ್ಗಿ, ಸೋಮನಾಥ, ಶರಣಪ್ಪ, ಹುಸೇನಪ್ಪ, ಶಿವಣ್ಣ ಬೆಣಕಲ್‌, ಹನುಮೇಶ ಹಾಗೂ ಬಸವರಾಜ ಮರಕುಂಬಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT