ಶನಿವಾರ, ಏಪ್ರಿಲ್ 1, 2023
31 °C

ಗಂಗಾವತಿ: ಅತ್ಯಾಚಾರ ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಂಗಾವತಿ: ನಗರದಲ್ಲಿ 5 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

‘ಸುರೇಶ (ಸೂರಿ) ಬಂಧಿತ ಆರೋಪಿ. ಮನೆಯಲ್ಲಿ ಇದ್ದ ಮಗುವಿಗೆ ₹ 1 ರೂಪಾಯಿ ನೀಡಿ, ಮನೆಯೊಳಗೆ ಕರೆದೊಯ್ದು ಅತ್ಯಾಚಾರವಸೆಗಿದ್ದಾನೆ. ಹೊರಗಡೆ ಮನೆಗೆಲಸ ಮಾಡುವ ತಾಯಿಯು ಮನೆಗೆ ಮರಳಿದಾಗ, ಬಾಲಕಿಯು ಆರೋಪಿ ಮಾಡಿದ ಕೃತ್ಯ ತಿಳಿಸಿದ್ದಾಳೆ. ತಕ್ಷಣವೇ ತಾಯಿಯು ಠಾಣೆಗೆ ದೂರು ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಫೊಕ್ಸೊ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ’ ಎಂದು ನಗರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ವೆಂಕಟಸ್ವಾಮಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು