ಕೊಪ್ಪಳ: ಅಕಾಲಿಕ ಆಲಿಕಲ್ಲು ಮಳೆಯಿಂದ ಬೆಳೆ ಹಾನಿಯಾದ ಜಿಲ್ಲೆಯ 4,828 ರೈತರಿಗೆ ಸರ್ಕಾರದಿಂದ ಪರಿಹಾರ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸುರೇಶ್ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಏಪ್ರಿಲ್ ಮತ್ತು ಮೇನಲ್ಲಿ ಸುರಿದ ಮಳೆಯಿಂದಾಗಿ ಸುಮಾರು 4739.24 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಯವರ ಮೂಲಕ ಜಂಟಿ ಸಮೀಕ್ಷೆ ಮಾಡಿ ಜೂನ್ 24ರಂದು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು.

ಹಾನಿಯಾದ ಬೆಳೆಗಳ ವಿವರಗಳನ್ನು ಪರಿಹಾರ ತಂತ್ರಾಂಶದ ಮೂಲಕ 5016ಕ್ಕೂ ಹೆಚ್ಚು ರೈತರ ಬೆಳೆಹಾನಿಯಾದ ವಿವರವನ್ನು ದತ್ತಾಂಶಗಳನ್ನು ದಾಖಲಿಸಲಾಗಿದೆ. ಅದರಲ್ಲಿ 4,828 ರೈತರಿಗೆ ₹6.84 ಕೋಟಿ ಪರಿಹಾರ ನೇರವಾಗಿ ರೈತರ ಖಾತೆಗೆ ಜಮೆಯಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.