ಕೊಪ್ಪಳ: ‘ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿ ಜಿಲ್ಲೆಯ ಅರ್ಹ ಮತ್ತು ಆಸಕ್ತ ರೈತರು ಬೆಳೆ ವಿಮೆ ಮಾಡಿಸಲು ಅಗತ್ಯ ಪ್ರಚಾರ ಕೈಗೊಂಡು ರೈತರಿಗೆ ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಯೋಜನೆಯಡಿ ಹಿಂಗಾರು, ಬೇಸಿಗೆ ಹಂಗಾಮಿನ ನೋಂದಣಿ ಕುರಿತಂತೆ ಕೃಷಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ‘2025-26ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ಅಧಿಸೂಚಿತ ಬೆಳೆಗಳಿಗೆ ವಿಮಾ ರಕ್ಷಣೆ ನೀಡುವುದು ಯೋಜನೆ ಮುಖ್ಯ ಉದ್ದೇಶವಾಗಿದೆ. ಬೆಳೆ ವಿಮೆಗೆ ಸಂಬಂಧಿಸಿದಂತೆ ರೈತರಿಗೆ ಎಲ್ಲಾ ಅನುಸೂಚಿತ ಬೆಳೆಗಳು ಮತ್ತು ಘಟಕಗಳ ಬಗ್ಗೆ ಬ್ಯಾಂಕುಗಳು, ರೈತ ಸಂಪರ್ಕ ಕೇಂದ್ರಗಳು ಮತ್ತು ಗ್ರಾಮ ಪಂಚಾಯಿತಿ ಕಚೇರಿಗಳ ಸೂಚನಾ ಫಲಕಗಳ ಮೇಲೆ ಪ್ರಕಟಿಸಿ ವ್ಯಾಪಕ ಪ್ರಚಾರ ನೀಡಬೇಕು’ ಎಂದರು.

‘ಸಾಮಾನ್ಯ ಸೇವಾ ಕೇಂದ್ರ ಮತ್ತು ಗ್ರಾಮ ಒನ್ ಕೇಂದ್ರಗಳು ಕಾಳಜಿಯಿಂದ ಕಾರ್ಯನಿರ್ವಹಿಸಬೇಕು. ನೀರಾವರಿ ಮತ್ತು ಒಣಬೇಸಾಯ ಪ್ರದೇಶದ ವಿವರಗಳನ್ನು ಸರಿಯಾಗಿ ನಮೂದಿಸಬೇಕು. ಬೆಳೆವಿಮೆ ನೋಂದಾವಣೆ ವೇಳೆ ರೈತರ ಆಧಾರ್ ಮತ್ತು ಮೊಬೈಲ್ ಸಂಖ್ಯೆಯ ವಿವರಗಳನ್ನು ಸರಿಯಾಗಿ ನಮೂದಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ ಪ್ರದರ್ಶಿಸಿ ಬೆಳೆವಿಮೆಯ ಪ್ರಚಾರವನ್ನು ಅಚ್ಚುಕಟ್ಟಾಗಿ ಮಾಡಬೇಕು’ ಎಂದು ಹೇಳಿದರು.

ಕೃಷಿ ಇಲಾಖೆ ಉಪನಿರ್ದೇಶಕ ಎಲ್. ಸಿದ್ದೇಶ್ವರ, ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಪ್ರಕಾಶ ದೇಶಪಾಂಡೆ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.