ಬೆನ್ನೂರ (ಕಾರಟಗಿ): ತಾಲ್ಲೂಕಿನ ಬೆನ್ನೂರ ಗ್ರಾಮದ ಚಹಾ ಅಂಗಡಿಯಲ್ಲಿ ಸೋಮವಾರ ಸಿಲಿಂಡರ್ ಸ್ಫೋಟಗೊಂಡು ಒಳಗಿದ್ದ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿವೆ. ಯಾವುದೇ ಅನಾಹುತ ಸಂಭವಿಸಿಲ್ಲ.
ಗ್ರಾಮದ ದೊಡ್ಡ ಯಮನೂರಪ್ಪಗೆ ಅವರ ಚಹಾ ಅಂಗಡಿಯಲ್ಲಿ ಘಟನೆ ಸಂಭವಿಸಿದೆ.
ಸಿಲಿಂಡರ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಇದನ್ನು ಕಂಡು ಅಲ್ಲಿದ್ದವರು ಬೇರೆಡೆ ತೆರಳುತ್ತಿದ್ದಂತೆಯೇ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸಾರ್ವಜನಿಕರೇ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.