ಸಿಎಂಗೆ ಪತ್ರ ಬರೆದಿಟ್ಟು ದಿನಗೂಲಿ ನೌಕರ ಆತ್ಮಹತ್ಯೆ

ಗಂಗಾವತಿ: ಅರಣ್ಯ ಇಲಾಖೆಯಲ್ಲಿ 34 ವರ್ಷಗಳಿಂದ ದಿನಗೂಲಿಯಾಗಿ ಕೆಲಸ ಮಾಡುತ್ತಿದ್ದರೂ ಸೇವೆ ಕಾಯಂಗೊಳಿಸಿಲ್ಲ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿಟ್ಟು, ಪ್ರಾದೇಶಿಕ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಆವರಣದಲ್ಲಿ ದಿನಗೂಲಿ ನೌಕರ ಮಲ್ಲಿಕಾರ್ಜುನ (59) ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ಯೋಜನೆ ಅಡಿ ನೇಮಕವಾದ ನೌಕರರನ್ನು ಕಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದಾರೆ. ನಾನೂ ಮೇ ತಿಂಗಳಿನಲ್ಲಿ ನಿವೃತ್ತಿಯಾಗಲಿದ್ದೇನೆ. ಭವಿಷ್ಯ ಕಷ್ಟವಾಗಲಿದೆ. ಹಾಗಾಗಿ ನೇಣಿಗೆ ಶರಣಾಗುತ್ತಿದ್ದೇನೆ. ಕೂಡಲೇ ನೌಕರರನ್ನು ಕಾಯಂ ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿಟ್ಟಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.