ಶನಿವಾರ, ಮೇ 28, 2022
30 °C

ಮಲ್ಲಿಕಾರ್ಜುನಗೌಡರ ವಜಾಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಾವರಗೇರಾ: ರಾಯಚೂರಿನಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ತೆಗೆಯಲು ಪಟ್ಟು ಹಿಡಿದು, ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರ ನಡೆ ಖಂಡಿಸಿ ಪಟ್ಟಣದಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಮಲ್ಲಿಕಾರ್ಜುನಗೌಡರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಕಂದಾಯ ಇಲಾಖೆ ಅಧಿಕಾರಿಗೆ ಸಲ್ಲಿಸಿದರು.

ಪ್ರತಿಭಟನೆ ವೇಳೆ ನಾಡ ಕಚೇರಿಯಲ್ಲಿ ಅಧಿಕಾರಿಗಳು ಇರಲಿಲ್ಲ. ಸಂಘಟನೆ ಪದಾಧಿಕಾರಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ಕಂದಾಯ ನಿರೀಕ್ಷಕ ಶರಣಪ್ಪ ದಾಸರ ಕಚೇರಿಗೆ ಆಗಮಿಸಿ ಮನವಿ ಸ್ವೀಕರಿಸಿದರು.

ಮುಖಂಡರಾದ ನಾಗರಾಜ ನಂದಾಪೂರ, ಸಂಜಿವ ಚಲುವಾದಿ, ಹೇಮರಾಜ, ಯಮನೂರಪ್ಪ, ದುರಗಪ್ಪ ದೇವರಮನಿ, ಗೌತಮ್ ಬಂಡಾರಿ, ಪ್ರಗತಿಪರ ಸಂಘಟನೆಗಳ ರಾಜಾ ನಾಯಕ, ಶ್ಯಾಮೀದಸಾಬ, ಸಿದ್ದಪ್ಪ ಉಪ್ಪಾರ, ಪ.ಪಂ. ಸದಸ್ಯ ಶ್ಯಾಮೂರ್ತಿ, ಪರಿಶಿಷ್ಟ ಮುಖಂಡರು ಮತ್ತು ವಿವಿಧ ಸಂಘಟನೆಗಳ ಸದಸ್ಯರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.