ಶನಿವಾರ, ಡಿಸೆಂಬರ್ 14, 2019
21 °C

ನೊಣಗಳ ಹಾವಳಿ ಹಿನ್ನೆಲೆ: ಜಿಲ್ಲಾಧಿಕಾರಿಗಳಿಂದ ಕೋಳಿ ಫಾರಂಗೆ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ನೊಣಗಳ ಹಾವಳಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಅವರು ಬುಧವಾರ ಕೊಪ್ಪಳ ತಾಲ್ಲೂಕಿನ ಬಸಾಪುರ ಗ್ರಾಮ ಸಮೀಪದ ಕೋಳಿ ಫಾರಂಗೆ ಭೇಟಿ ನೀಡಿದರು. 

ಅಲ್ಲಿನ ವ್ಯವಸ್ಥೆ ಕಂಡು ಮಾತನಾಡಿದ ಜಿಲ್ಲಾಧಿಕಾರಿ, 'ಫಾರಂನಲ್ಲಿ ಕನಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸದಿರುವುದು ಕಂಡು ಬಂದಿದೆ. ಸುತ್ತಮುತ್ತಲಿನ  ಪ್ರದೇಶದಲ್ಲಿ ನೊಣಗಳ ಹಾವಳಿ ಹೆಚ್ಚಾಗಲು ಇದು ಪ್ರಮುಖ ಕಾರಣ. ಕೂಡಲೆ ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಫಾರಂ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು' ಎಂದು ಮಾಲೀಕ ಹಾಗೂ ಅಲ್ಲಿನ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು. 

ಬಳಿಕ ಬಸಾಪುರ ಸಮೀಪದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪೊಲೀಸ್‍ ಸಿಬ್ಬಂದಿಗಳ ವಸತಿ ಗೃಹಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಅಲ್ಲಿನ ನಿವಾಸಿಗಳಿಂದ ಅಹವಾಲು ಆಲಿಸಿದರು. ಅಲ್ಲದೆ ಶೀಘ್ರದಲ್ಲಿಯೇ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. 

ರಿಸರ್ವ್‌ ಪೊಲೀಸ್‍ ಇನ್ಸ್‍ಪೆಕ್ಟರ್‍ ಗಣೇಶ, ಬಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯರು, ಕೋಳಿ ಫಾರಂ ಮಾಲೀಕ  ಕೆ.ಸಿ.ಎನ್‍.ರೆಡ್ಡಿ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು