ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗಾವತಿ: ದೀನ್ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

Published 25 ಸೆಪ್ಟೆಂಬರ್ 2023, 16:13 IST
Last Updated 25 ಸೆಪ್ಟೆಂಬರ್ 2023, 16:13 IST
ಅಕ್ಷರ ಗಾತ್ರ

ಗಂಗಾವತಿ: ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮ ದಿನ ಆಚರಿಸಲಾಯಿತು.

ಮಾಜಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಬಿಜೆಪಿ ಅಭಿವೃದ್ಧಿಗೆ ಹಲವು ನಾಯಕರು, ಮುಖಂಡರು, ಕಾರ್ಯಕರ್ತರ ಶ್ರಮ ಅಪಾರವಿದ್ದು, ಅವರ ಪ್ರಾಮಾಣಿಕ ಕೆಲಸದಿಂದಲೇ ರಾಷ್ಟ್ರದಲ್ಲಿಂದು ಬಿಜೆಪಿ ಬಲಿಷ್ಠ ಪಕ್ಷವಾಗಿ ಬೆಳೆದು, ಜನಪರ ಆಡಳಿತ ನಡೆಸುತ್ತಿದೆ. ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರು ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತದ ಅಂದಿನ ರಾಷ್ಟ್ರನಾಯಕರಲ್ಲಿ ನಡೆಯುತ್ತಿದ್ದ ಸೈದ್ಧಾಂತಿಕ ವಾದ-ವಿವಾದ, ಸಮಾಜವಾದ, ವಿಮರ್ಶಾವಾದಗಳ ನಡುವೆ ರಾಷ್ಟ್ರಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಯುವಕರಲ್ಲಿ ದೇಶಪ್ರೇಮ
ತುಂಬಿದ್ದಾರೆ. ಇಂತಹ ಆದರ್ಶ ವ್ಯಕ್ತಿಯ ಜೀವನ ತತ್ವಗಳು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.

ನಂತರ ಪಂಡಿತ್ ದೀನ ದಯಾಳ್ ಉಪಾಧ್ಯಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

ಬಿಜೆಪಿ ಪಕ್ಷದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶಿವಕುಮಾರ ಅರಿಕೇರಿ, ಗಿರೇಗೌಡ, ಕಾಶಿನಾಥ ಚಿತ್ರಗಾರ, ನೀಲಕಂಠ ಕಟ್ಟಿಮನಿ, ನವೀನ್ ಕುಮಾರ, ರಾಚಪ್ಪ ಸಿದ್ದಾಪೂರ, ಸಂಗಯ್ಯ ಸ್ವಾಮಿ, ಸಂಗಮೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT