ಕುಷ್ಟಗಿ: ರಾಜೀವ್ ಗಾಂಧಿ ವಸತಿ ಯೋಜನೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸುವಂತೆ ಶಾಸಕ ದೊಡ್ಡನಗೌಡ ಪಾಟೀಲ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಣ ಕೊಟ್ಟವರಿಗೆ ಮಾತ್ರ ಮನೆ ಮಂಜೂರು ಮಾಡಲಾಗುತ್ತಿದೆ ಎಂಬ ಆಡಿಯೊ ಬಹಿರಂಗಗೊಂಡಿದ್ದು, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಶಾಸಕ ಬಿ.ಆರ್.ಪಾಟೀಲ ಅವರು ಆಡಿರುವ ಮಾತುಗಳು ಕಾಂಗ್ರೆಸ್ ಸರ್ಕಾರದಲ್ಲಿ ಯಾವ ಮಟ್ಟದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ಪ್ರತಿಬಿಂಬಿಸಿವೆ’ ಎಂದರು.

‘ವಸತಿ ಯೋಜನೆಯಲ್ಲಿನ ಹಗರಣದ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮೌನ ಮುರಿಯದಿರುವುದನ್ನು ನೋಡಿದರೆ ಅವರಿಗೆ ಸತ್ಯ ಗೊತ್ತಿದೆ. ವಿಷಯ ಸಂಚಲನ ಸೃಷ್ಟಿಸಿದ್ದರೂ ಚಕಾರ್ ಎತ್ತದಿರುವುದು ಬಿ.ಆರ್.ಪಾಟೀಲರ ಆರೋಪಕ್ಕೆ ಪುಷ್ಠಿ ಒದಗಿಸಿದೆ’ ಎಂದರು.

‘ವಸತಿ ಯೋಜನೆಯಲ್ಲಿ ಮಧ್ಯವರ್ತಿಗಳ ಹಾವಳಿ ಮಿತಿಮೀರಿದ್ದು, ಈ ಕುರಿತು ಈ ಹಿಂದೆಯೇ ಸರ್ಕಾರಕ್ಕೆ ದೂರು ಸಲ್ಲಿಸಿದ್ದೆ. ಈಗ ಬಿ.ಆರ್.ಪಾಟೀಲರು ಅದನ್ನೇ ಹೇಳಿದ್ದಾರೆ. ಈ ಕ್ಷೇತ್ರದಲ್ಲೂ ಮನೆಗಳ ಹಂಚಿಕೆಯಲ್ಲಿ ತಾರತಮ್ಯವಾಗಿದೆ. ವಿರೋಧ ಪಕ್ಷಗಳಷ್ಟೇ ಅಲ್ಲ ಕಾಂಗ್ರೆಸ್ ಪಕ್ಷದ ಬಹಳಷ್ಟು ಶಾಸಕರೇ ಸರ್ಕಾರದ ವಿರುದ್ಧ ಬಂಡೇಳುವಂತಹ ಸ್ಥಿತಿ ಇದೆ’ ಎಂದು ಹೇಳಿದರು.

ಬಿಜೆಪಿ ಅಧ್ಯಕ್ಷರ ಬದಲಾವಣೆ ಅನುಮಾನ: ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ತನ್ನದೇ ಆದ ನಿರ್ಧಾರ ತೆಗೆದುಕೊಳ್ಳಲಿದೆ. ಅದರೆ ಕೇವಲ ಎರಡು ವರ್ಷ ಮಾತ್ರ ಪೂರೈಸಿರುವ ಬಿ.ವೈ.ವಿಜಯೇಂದ್ರ ಅವರನ್ನು ಬದಲಾಯಿಸದೆ ಅವರನ್ನೇ ಮುಂದುವರೆಸಲೂಬಹುದು ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು. ಆದರೆ ಈ ವಿಚಾರದಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.

‘ಕೆ.ಎಸ್.ಈಶ್ವರಪ್ಪ ಅವರನ್ನು ಪುನಃ ಪಕ್ಷಕ್ಕೆ ಸೇರ್ಪಡೆ ವಿಚಾರ ಗೊತ್ತಿಲ್ಲ. ಈಶ್ವರಪ್ಪ ಪಕ್ಷಕ್ಕೆ ಸಾಕಷ್ಟು ದುಡಿದವರು. ಅವರು ಮರಳಿ ಬಂದರೆ ಖಂಡಿತ ಬಿಜೆಪಿ ಬಲ ಹೆಚ್ಚಲಿದೆ. ಹಿಂದೆ ಬಹಳಷ್ಟು ಜನ ಪಕ್ಷ ಬಿಟ್ಟು ಹೋಗಿದ್ದಾರೆ, ಮತ್ತೆ ಮರಳಿದ್ದಾರೆ. ಯತ್ನಾಳ, ಈಶ್ವರಪ್ಪ ಅವರ ವಿಷಯದಲ್ಲೂ ಹಾಗೇ ಆಗಬಹುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.