ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕನೂರು: ಸಂಸದ ಅನಂತಕುಮಾರ ಹೆಗಡೆ ಗಡಿಪಾರಿಗೆ ಆಗ್ರಹ

Published 19 ಮಾರ್ಚ್ 2024, 15:27 IST
Last Updated 19 ಮಾರ್ಚ್ 2024, 15:27 IST
ಅಕ್ಷರ ಗಾತ್ರ

ಕುಕನೂರು: ಸಂಸದ ಅನಂತಕುಮಾರ ಹೆಗಡೆ ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಗ್ರೇಡ್-2 ತಹಶೀಲ್ದಾರ್ ಮುರುಳಿಧರ ಕುಲಕರ್ಣಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು.

ಒಕ್ಕೂಟದ ಕಲಬುರಗಿ ವಿಭಾಗೀಯ ಉಪಾಧ್ಯಕ್ಷ ಬಸವರಾಜ ನಡುವಲಮನಿ ಮಾತನಾಡಿ, ‘ರಾಜ್ಯದ ಬಿಜೆಪಿಯ ಸಂಸದ ಹೆಗಡೆ ಅವರು ಪದೇಪದೆ ಸಂವಿಧಾನವನ್ನು ನಾವು ಬದಲಾಯಿಸುತ್ತೇವೆ ಎಂದು ಹೇಳಿಕೆ ನೀಡುತ್ತಾ ಬಂದಿದ್ದಾರೆ. ಆದರೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಾಗಲಿ ಅವರ ವಿರುದ್ಧ ಏನೂ ಕ್ರಮ ಕೈಗೊಂಡಿಲ್ಲ. ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು’ ಎಂದು ಒತ್ತಾಯಿಸಿದರು.

ಬಸವರಾಜ ನಡುವಲಮನಿ, ಶಿವಪ್ಪ ಭಂಡಾರಿ, ವೆಂಕಟೇಶ ಬಳ್ಳಾರಿ, ರವಿ ಹಿರೇಮನಿ, ಶರಣಪ್ಪ ಹಿರೇಮನಿ, ಹನಮಂತಪ್ಪ ಕಡೇಮನಿ, ಅಂದಪ್ಪ ಭಂಡಾರಿ, ಲೋಹಿತ್ ಹಿರೇಮನಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT