ಸೋಮವಾರ, ಸೆಪ್ಟೆಂಬರ್ 28, 2020
20 °C
ವಾಲ್ಮೀಕಿ ಮಹಾಸಭಾದ ಪ್ರಮುಖರಿಂದ ಪ್ರತಿಭಟನೆ

ಶೇ 7.5 ಮೀಸಲಾತಿ ಹೆಚ್ಚಳಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕುಷ್ಟಗಿ: ವಾಲ್ಮೀಕಿ ನಾಯಕ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 7.5ರಷ್ಟು ಮೀಸಲಾತಿ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ವಾಲ್ಮೀಕಿ ನಾಯಕ ಮಹಾಸಭಾ ಸರ್ಕಾರವನ್ನು ಒತ್ತಾಯಿಸಿದೆ.

ಮೀಸಲಾತಿ ಮತ್ತು ಇತರೆ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪಟ್ಟಣದಲ್ಲಿ ಬುಧವಾರ ತಾಲ್ಲೂಕು ಘಟಕದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಅಧ್ಯಕ್ಷ ಬಸವರಾಜ ನಾಯಕ ಅವರು,   ವಾಲ್ಮೀಕಿ ಸಮುದಾಯ ರಾಜ್ಯದಲ್ಲಿ ಸುಮಾರು 75 ಲಕ್ಷ ಜನಸಂಖ್ಯೆ ಹೊಂದಿದೆ. ಸಮುದಾಯದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ನೀಡುವ ಮೀಸಲಾತಿಯಲ್ಲಿ ನ್ಯಾಯಯುತ ಪಾಲು ದೊರೆತಿಲ್ಲ ಎಂದು ಹೇಳಿದರು.

ಈ ವಿಷಯದಲ್ಲಿ ಸಮುದಾಯ ಜನರು ಅನೇಕ ವರ್ಷಗಳಿಂದಲೂ ಹೋರಾಟ ನಡೆಸುವ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಲೇ ಬಂದಿದ್ದಾರೆ. ರಾಜನಹಳ್ಳಿಯಿಂದ  ಬೆಂಗಳೂರಿನ ತನಕ ಪಾದಯಾತ್ರೆ ನಡೆಸಲಾಯಿತು. ಇಷ್ಟಾದರೂ ಸರ್ಕಾರ ಸಮುದಾಯದ ಬೇಡಿಕೆಯನ್ನು ಸಹಾನುಭೂತಿಯಿಂದ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ದೂರಿದರು. 

ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಹೋರಾಟದ ಸ್ವರೂಪವೇ ಬದಲಾಗುತ್ತದೆ. ಅದಕ್ಕೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಕಲಿ ಜಾತಿ ಪ್ರಮಾಣಪತ್ರ ಪಡೆದವರ ಮತ್ತು ನೀಡಿದವರ ವಿರುದ್ಧ ಕ್ರಮ ಜರುಗಿಸಬೇಕು. ಕೊಪ್ಪಳ ಜಿಲ್ಲೆಯಲ್ಲಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮವನ್ನಾಗಿ ಪ್ರತ್ಯೇಕಿಸಬೇಕು. ಪರಿಶಿಷ್ಟ ಪಂಗಡಕ್ಕೆ ಪ್ರತ್ಯೇಕ ವಾಲ್ಮೀಕಿ ಸಚಿವಾಲಯ ಸ್ಥಾಪಿಸುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ತಕ್ಷಣ ಮುಂದಾಗಬೇಕು ಎಂದು ಒತ್ತಾಯಿಸಿದರು.

ಗ್ರೇಡ್‌ 2 ತಹಶೀಲ್ದಾರ್ ವಿಜಯಾ ಮನವಿ ಸ್ವೀಕರಿಸಿದರು.

ಪ್ರಮುಖರಾದ ಹ.ಯ.ಈಟಿಯವರ, ಅಡಿವೆಪ್ಪ ನೆರೆಬೆಂಚಿ, ಚಂದ್ರಹಾಸ ಭಾವಿಕಟ್ಟಿ, ಬಾಲಪ್ಪ ಚಾಕರಿ, ರಮೇಶ ಕೊಳ್ಳಿ, ಕಳಕಪ್ಪ ಉಂಡಿ, ಮಾನಪ್ಪ ತಳವಾರ, ಪರಸಪ್ಪ ನಂದಿಹಾಳ, ಶಿವನಗೌಡ ಮದಲಗಟ್ಟಿ, ಈರಪ್ಪ ನಾಯಕ, ತಾಲ್ಲೂಕು ಪಂಚಾಯಿತಿ ಸದಸ್ಯ ಭೀಮಣ್ಣ ತಲೆಖಾನ, ಭೀಮನಗೌಡ ನಂದಿಹಾಳ, ದೊಡ್ಡಪ್ಪ ಗೋನಾಳ, ಹನುಮಂತ ನಾಯಕ, ನಾಗರಾಜ ಹಜಾಳ,ವೆಂಕಟೇಶ ತಾವರಗೇರಿ, ಶರಣಪ್ಪ ಲೈನದ ಹಾಗೂ ಸಮುದಾಯದ ಜನರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು