ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಕಾಲೇಜು ಸ್ಥಾಪನೆಗೆ ಆಗ್ರಹ

Last Updated 17 ಜನವರಿ 2022, 5:13 IST
ಅಕ್ಷರ ಗಾತ್ರ

ಹನುಮಸಾಗರ: ಜಿಲ್ಲೆಯ ಗಡಿ ಭಾಗವಾಗಿರುವ ಹಾಗೂ ಶೈಕ್ಷಣಿಕ ಸೌಲಭ್ಯಗಳ ಕೊರತೆ ಎದುರಿಸುತ್ತಿರುವ ಜಿಲ್ಲೆಯ ಗಡಿಭಾಗ ನಿಲೋಗಲ್ ಗ್ರಾಮಕ್ಕೆ ಪದವಿ ಪೂರ್ವ ಕಾಲೇಜು ಸ್ಥಾಪನೆ ಮಾಡದಿದ್ದರೆ ಸುತ್ತಲಿನ ಹತ್ತಾರು ಗ್ರಾಮಗಳ ಜನರೊಡಗೂಡಿ ಹೋರಾಟ ಮಾಡಲಾಗುತ್ತದೆ ಎಂದು ಭಾನುವಾರ ನಿಲೋಗಲ್ ಗ್ರಾಮಸ್ಥರು ಒತ್ತಾಯಿಸಿದರು.

ವಿವಿಧ ಭಾಗಗಳಿಗೆ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಅನುಮತಿ ದೊರಕಿರುವ ಹಿನ್ನಲೆಯಲ್ಲಿ ಭಾನುವಾರ ಗ್ರಾಮಸ್ಥರು ಸೇರಿದಂತೆ ಸುತ್ತಲಿನಹಳ್ಳಗರು ಸಭೆ ಸೇರಿ ಈ ರೀತಿ ತೀರ್ಮಾನ ತೆಗೆದುಕೊಂಡರು.

1984ರಲ್ಲಿಯೇ ನಿಲೋಗಲ್ ಗ್ರಾಮದಲ್ಲಿ ಸರ್ಕಾರಿ ಪ್ರೌಢ ಶಾಲೆ ಸ್ಥಾಪನೆಯಾಗಿದೆ. ಶಾಲೆಯಲ್ಲಿ 452 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಪ್ರೌಢ ಶಿಕ್ಷಣ ಮುಗಿಸಿದ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸಕ್ಕಾಗಿ ದೂರದ ಪಟ್ಟಣಗಳಿಗೆ ಹೋಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಇಲ್ಲಿಗೆ ಕಾಲೇಜು ಮಂಜೂರು ಮಾಡುವುದು ಅನಿವಾರ್ಯವಾಗಿದೆ. ಈಗಾಗಲೇ ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದೇವೆ ಎಂದು ಗ್ರಾಮದ ಮುಖಂಡರು ತಿಳಿಸಿದರು.

ನಿಲೋಗಲ್ ಗ್ರಾಮ ಸೇರಿದಂತೆ ರಾಂಪೂರ, ವಕ್ಕನದುರ್ಗಾ, ಬೊಮ್ಮನಾಳ, ಬಸಾಪೂರ, ಬಿಳೇಕಲ್ ಹಾಗೂ ಮಿಟ್ಟಲಕೋಡ ಗ್ರಾಮಸ್ಥರು ಭಾಗವಹಿಸಿ, ಕೂಡಲೇ ನಿಲೋಗಲ್ ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ನಿಲೋಗಲ್ ಗ್ರಾಮ ಕುಷ್ಟಗಿಯಿಂದ 50 ಕಿ.ಮೀ ದೂರದಲ್ಲಿದೆ. ಜಿಲ್ಲೆ ಹಾಗೂ ವಿಭಾಗದ ಗಡಿ ಗ್ರಾಮವಾದ ನಿಲೋಗಲ್‍ದಲ್ಲಿ ಸರ್ಕಾರ ಪಿಯು ಕಾಲೇಜು ಸ್ಥಾಪಿಸಬೇಕೆಂದು ಒತ್ತಾಯಿಸು ವುದರ ಜತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT