ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಳಸಂತೆಗೆ ಮಾರುವವರನ್ನು ಗಡಿಪಾರು ಮಾಡಲು ಆಗ್ರಹ

Last Updated 1 ಅಕ್ಟೋಬರ್ 2022, 16:41 IST
ಅಕ್ಷರ ಗಾತ್ರ

ಕೊಪ್ಪಳ: ಬಡ ಜನಾಂಗದವರಿಗೆ ಪ್ರತಿ ತಿಂಗಳು ಪಡಿತರ ಚೀಟಿ ಮೂಲಕ ಸರ್ಕಾರಿ ನ್ಯಾಯಬೆಲೆ ಅಂಗಡಿಗಳ ಮೂಲಕ ಅಕ್ಕಿ, ಗೋದಿ, ಜೋಳ ಸೇರಿದಂತೆ ಅಗತ್ಯ ಆಹಾರ ಸಾಮಗ್ರಿಗಳನ್ನು ಸಬ್ಸಿಡಿ ದರದಲ್ಲಿ ನೀಡಲಾಗುತ್ತಿದೆ. ಅವುಗಳನ್ನು ಕೆಲವರು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಾದಾಸಾಹೇಬ್ ಎನ್. ಮೂರ್ತಿ ಸ್ಥಾಪಿತ) ರಾಜ್ಯ ಸಮಿತಿ ಸದಸ್ಯರು ಆಗ್ರಹಿಸಿದರು.

ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ ಸದಸ್ಯರು ‘ಒಪ್ಪತ್ತಿನ ಗಂಜಿಗೂ ಅದೆಷ್ಟೋ ಕುಟುಂಬಗಳು ಹಸಿವೆಯಿಂದ ದಿನ ಕಳೆಯುತ್ತಿವೆ. ಬಡವರಿಗೆ ದಕ್ಕಬೇಕಾದ ಆಹಾರ ಸಾಮಗ್ರಿಗಳನ್ನು ನ್ಯಾಯಬೆಲೆ ಅಂಗಡಿಗಳಿಗೆ ಸರಬರಾಜು ಮಾಡುವಲ್ಲಿ ಸೋರಿಕೆ ಮಾಡುತ್ತಿದ್ದಾರೆ. ಅಲ್ಲದೇ ಬಡ ಜನರಿಗೆ ಸರಿಯದ ಪ್ರಮಾಣದಲ್ಲಿ ಆಹಾರ ಧಾನ್ಯ ನೀಡುವುದಿಲ್ಲ. ’ ಎಂದು ರಾಜ್ಯ ಸಮಿತಿ ನಿರ್ದೇಶಕ ಡಾ. ಜ್ಞಾನಸುಂದರ್ ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಜಿಲ್ಲಾಧಿಕಾರಿ ಮೂಲಕ ಗೃಹಮಂತ್ರಿಗಳಿಗೆ ಹಾಗೂ ಆಹಾರ ಇಲಾಖೆಯ ಸಚಿವಾಲಯಕ್ಕೆ ಮನವಿ ಪತ್ರ ಸಲ್ಲಿಸಿದರು.

ಕಲಬುರಗಿ ವಿಭಾಗ ಪದಾಧಿಕಾರಿಗಳಾದ ರಾಮಣ್ಣ ಕಂದಾರಿ, ಬಸವರಾಜ ಸಾಸಲಮರಿ, ಜಿಲ್ಲಾ ಕಾರ್ಯಾಧ್ಯಕ್ಷ ಚಂದಪ್ಪ ಕುದರಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮರಿಸ್ವಾಮಿ, ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆ ಸರಸ್ವತಿ ನಾಗರಾಜ, ರಾಯಚೂರು ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ನಂಜಲದಿನ್ನಿ, ಬಸವರಾಜ ಕುಣೆಕಲ್, ಕುಷ್ಟಗಿ ತಾಲ್ಲೂಕು ಘಟಕದ ಅಧ್ಯಕ್ಷ ಗಂಗಪ್ಪ, ಹುಸೇನಪ್ಪ, ಚಿನ್ನಪ್ಪ ಹಂಪನಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT