ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರ್ಮಿಕ ಸಂಹಿತೆ ವಾಪಸ್‌ ಪಡೆಯಲು ಆಗ್ರಹ; ಪ್ರತಿಭಟನೆ

Published 10 ಜುಲೈ 2024, 16:31 IST
Last Updated 10 ಜುಲೈ 2024, 16:31 IST
ಅಕ್ಷರ ಗಾತ್ರ

ಕೊಪ್ಪಳ: ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಾಪಸ್‌ ಪಡೆಯಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌ (ಸಿಐಟಿಯು) ಸಂಘಟನೆಯ ಜಿಲ್ಲಾ ಘಟಕದ ಸದಸ್ಯರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಅಗತ್ಯ ವಸ್ತುಗಳ ಬೆಲೆಏರಿಕೆ ನಿಯಂತ್ರಿಸಬೇಕು, ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ ಬಡವರು ಬದುಕಲು ಅವಕಾಶ ಕಲ್ಪಿಸುವ ನೀತಿಗಳನ್ನು ಜಾರಿಗೆ ತರಬೇಕು, ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್‌ ಪಡೆಯಬೇಕು, ದೇಶದ ಐಕ್ಯತೆ ಒಡೆಯುವ ಹಾಗೂ ಸೌಹಾರ್ದತೆ ಹಾಳುಮಾಡುವ ಶಕ್ತಿಗಳ ಮೇಲೆ ಕಣ್ಗಾವಲು ಇರಿಸಬೇಕು, ರೈಲ್ವೆ, ವಿದ್ಯುತ್‌ ಒಳಗೊಂಡ ಎಲ್ಲ ಕ್ಷೇತ್ರಗಳ ಖಾಸಗೀಕರಣ ವಿಚಾರ ಕೈ ಬಿಡಬೇಕು ಎಂದು ಆಗ್ರಹಿಸಿದರು.

ಈ ಕುರಿತು ದೇಶದಾದ್ಯಂತ ಪ್ರತಿಭಟನೆ ನಡೆದಿದ್ದು ಅದರ ಭಾಗವಾಗಿ ನಗರದಲ್ಲಿಯೂ ಪ್ರತಿಭಟನೆ ಜರುಗಿತು. ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಖಾಸಿಂ ಸರ್ದಾರ್, ಪ್ರಾಂತ ರೈತ ಸಂಘದ ಜಿಲ್ಲಾ ಮುಖಂಡರಾದ ದೊಡ್ಡನಗೌಡ ಪಾಟೀಲ, ಹನುಮಂತ ಗುರಿಕಾರ, ವಾಸೀಂ ಸಿದ್ನೆಕೊಪ್ಪ, ಮೀರಾಸಾಬ್‌,  ರಂಜಾನ್ ಸಾಬ್, ಷಣ್ಮುಖಪ್ಪ, ಅಲ್ಲಾಬಿ ಹಾಗೂ ಸಾವಿತ್ರಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT