ಬುಧವಾರ, ಆಗಸ್ಟ್ 10, 2022
25 °C

ಕೊಪ್ಪಳ: ನೌಕರಿ ಕಾಯಂಗೆ ಆಗ್ರಹಿಸಿ ನಾಳೆ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ರಾಜ್ಯದ ನಗರ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಸ್ವಚ್ಛತಾ ಕಾರ್ಮಿಕರ ಕೆಲಸವನ್ನು ಕಾಯಂ ಮಾಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ಕರ್ಮಚಾರಿ ಹಾಗೂ ಪೌರಕಾರ್ಮಿಕ ಸಂಘಟನೆ ಜು. 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಪ್ರಗತಿಪರ ಪೌರಕಾರ್ಮಿಕ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜೆ. ಭಾರದ್ವಾಜ್‌ ‘ಅಂದು ಜಿಲ್ಲೆಯಲ್ಲಿ ಸ್ವಚ್ಛತಾ ಸಿಬ್ಬಂದಿ ಕೆಲಸ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವರು. 2ರಿಂದ  ಸ್ವಚ್ಛತಾ ಕಾರ್ಮಿಕರು ಆಯಾ ನಗರದ ಸರ್ಕಾರಿ ಕಚೇರಿ ಬಳಿ ಮುಷ್ಕರ ಮುಂದುವರಿಸಲಿದ್ದಾರೆ‘ ಎಂದು ತಿಳಿಸಿದರು.

‘ರಾಜ್ಯಾದ್ಯಂತ 36 ಸಾವಿರ ಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕೆಲಸ  ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಎರಡು ಸಾವಿರ ಕಾರ್ಯಕ್ರಮ ಇದ್ದಾರೆ. ಅವರಿಗೆ ಪಿಎಫ್, ಇಎಸ್‌ಐ ಹಾಗೂ ಸಮಾನ ವೇತನ ದೊರೆಯುತ್ತಿಲ್ಲ.  ಮಹಿಳಾ ಪೌರಕಾರ್ಮಿಕರಿಗೆ ಶೌಚಾಲಯ, ಕುಡಿಯುವ ನೀರು, ಹೆರಿಗೆ ಭತ್ಯೆ ಸೌಲಭ್ಯಗಳನ್ನು ಕೊಡಬೇಕು‘ ಎಂದು ಆಗ್ರಹಿಸಿದರು.

ಮುಖಂಡರಾದ ಸಣ್ಣ ಹನುಮಂತಪ್ಪ, ಪರಶುರಾಮ, ಕೇಶವ ನಾಯಕ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು