ಕೊಪ್ಪಳ: ‘ದೇಶದಲ್ಲಿನ ಮತಗಳ್ಳತನದ ವಿರುದ್ದ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಸಹಿ ಸಂಗ್ರಹ ಅಭಿಯಾನ ಮಾಡಲಾಗುತ್ತಿದೆ. ಬಿಜೆಪಿಯವರು ಬಂದರೆ ಕಳ್ಳರು ಬಂದರು ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಆರೋಪಿಸಿದರು.

ಕಾಂಗ್ರೆಸ್ ಪಕ್ಷದ ವತಿಯಿಂದ ‘ವೋಟ್ ಚೋರ್ ಗದ್ದಿ ಚೋಡ್’ ಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಭಾನುವಾರ ನಡೆದ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಮತಗಳ್ಳತನ ಮಾಡುವ ಬಿಜೆಪಿಗರಿಗೆ ಎಚ್ಚರಿಕೆ ಕೊಡುವಷ್ಟರ ಮಟ್ಟಿಗೆ ಜನ ಬುದ್ದಿವಂತರಾಗಿದ್ದಾರೆ’ ಎಂದರು.

‘ಮತದಾನ ಜನರಿಗೆ ಸಿಕ್ಕ ಶ್ರೇಷ್ಠ ಅವಕಾಶವಾಗಿದ್ದು, ಇದು ಬಿ.ಆರ್. ಅಂಬೇಡ್ಕರ್ ಅವರು ಕೊಟ್ಟ ಶಕ್ತಿ. ಪ್ರಜಾಪ್ರಭುತ್ವದಲ್ಲಿ ಮತ ಕಳ್ಳತನದಿಂದ ಜನರಿಗೆ ಮೋಸ ಮಾಡುವ ಕೆಲಸಗಳು ನಡೆದಿವೆ. ಎನ್ಡಿಎ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ. ಇದನ್ನು ದೇಶವ್ಯಾಪ್ತಿ ಜನರಿಗೆ ತಿಳಿಸುವ ಕೆಲಸ ಮಾಡಲಾಗುವುದು. ಮತಗಳ್ಳತನ ಬಗ್ಗೆ ಹತ್ತು ವರ್ಷಗಳ ಹಿಂದೆಯೇ ಹೇಳಿದ್ದೆ. ಈಗ ಅದು ಸಾಬೀತು ಆಗುತ್ತಿದೆ. ಇವಿಎಂ ಯಂತ್ರದ ಮೂಲಕವೂ ಆಗುತ್ತಿರುವ ಲೋಪ ಹೊರಗಡೆ ತರುತ್ತೇವೆ’ ಎಂದು ಹೇಳಿದರು.

‘ನ್ಯಾಯದ ಹಾದಿಯಲ್ಲಿ ಚುನಾವಣೆ ನಡೆದರೆ ಬಿಜೆಪಿಯವರಿಗೆ ವಿಳಾಸವೇ ಇರುವುದಿಲ್ಲ. ವಾಮಮಾರ್ಗದ ಮೂಲಕ ಬಿಜೆಪಿ ಜನಾದೇಶ ಕಗ್ಗೊಲೆ ಮಾಡಲು ಮುಂದಾಗಿದೆ. ಬಿಜೆಪಿಯ ಯಾವುದೇ ನಾಯಕರು ಬಂದರೂ ಕಳ್ಳರು ಎಂದು ಕರೆಯಬೇಕು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಶಾಸಕ ರಾಘವೇಂದ್ರ ಹಿಟ್ನಾಳ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ಜ್ಯೋತಿ ಗೊಂಡಬಾಳ, ಗಾಳೆಪ್ಪ ಪೂಜಾರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರೆಡ್ಡಿ ಶ್ರೀನಿವಾಸ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಟನ್ ಪಾಷಾ, ಭಾಗ್ಯನಗರ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಹೊನ್ನೂರಸಾಬ್ ಬೈರಾಪುರ, ಮುಖಂಡರಾದ ಯಂಕಣ್ಣ ಯರಾಶಿ, ಕೃಷ್ಣ ಇಟ್ಟಂಗಿ ಸೇರಿದಂತೆ ಅನೇಕರು ಇದ್ದರು.

ಸಮೀಕ್ಷೆ ವಿಚಾರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಣ್ಣತನ ಪ್ರದರ್ಶನ ಮಾಡುತ್ತಿದ್ದಾರೆ. ಅವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ ಎನ್ನುವುದಕ್ಕೆ ಅವರು ನೀಡಿದ ಹೇಳಿಕೆಯೇ ಸಾಕ್ಷಿ.
ಶಿವರಾಜ ತಂಗಡಗಿ ಜಿಲ್ಲಾ ಉಸ್ತುವಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.