ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಕೈಜೋಡಿಸಿ’

Last Updated 16 ಜುಲೈ 2021, 16:03 IST
ಅಕ್ಷರ ಗಾತ್ರ

ಯಲಬುರ್ಗಾ: ತಾಲ್ಲೂಕಿನ ಬೇವೂರು ಹಾಗೂ ವಣಗೇರಿ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಫೌಜಿಯಾ ತರನ್ನಮ್ ಹಾಗೂ ಇನ್ನಿತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ಯಾವುದೇ ಯೋಜನೆಗಳು ಪರಿಣಾಮಕಾರಿ ಹಾಗೂ ಯಶಸ್ವಿಯಾಗಿ ಜಾರಿಗೊಳ್ಳಬೇಕಾದರೆ ಅವುಗಳು ತಳಹಂತದಿಂದಲೇ ಅಚ್ಚುಕಟ್ಟಾಗಿ ಜಾರಿಗೊಳ್ಳಬೇಕಾಗಿದೆ. ಅಧಿಕಾರ ವಿಕೇಂದ್ರೀಕರಣದಿಂದಾಗಿ ಗ್ರಾಮೀಣ ಪ್ರದೇಶದಲ್ಲಿಯೇ ಬಹುತೇಕ ಯೋಜನೆಗಳ ಜಾರಿಗೆ ಹಾಗೂ ಅನುಷ್ಠಾನಕ್ಕೆ ಕ್ರಮಕೈಗೊಳ್ಳಲಾಗುತ್ತಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇಚ್ಚಾಶಕ್ತಿ ತೋರಿದರೆ ಗ್ರಾಮಗಳ ಸಮಗ್ರ ಅಭಿವೃದ್ಧಿ ಸಾಧ್ಯವಿದೆ‘ ಎಂದು ಸಿಇಒ ಫೌಜಿಯಾ ಹೇಳಿದರು.

’ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವತ್ತ ಗ್ರಾಮಸ್ಥರು ಮುಂದೆ ಬರಬೇಕು. ಸ್ಥಳೀಯವಾಗಿ ಉದ್ಯೋಗ ಲಭ್ಯವಾಗುವುದರಿಂದ ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಉದ್ಯೋಗ ಪಡೆದುಕೊಳ್ಳುವುದು ಹಾಗೂ ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವ್ಯಾಪಕ ಪ್ರಚಾರ ಹಾಗೂ ಸೂಕ್ತಕ್ರಮಕ್ಕೆ ಮುಂದಾಗಬೇಕು‘ ಎಂದು ಸಲಹೆ ನೀಡಿದರು.

ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾದ ಜಲ ಜೀವನ್ ಮಿಷನ್ ಪರಿಣಾಮಕಾರಿ ಜಾರಿಗೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ತೋರಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ, ಸಹಾಯಕ ನಿರ್ದೇಶಕ ಗೀತಾ ಅಯ್ಯಪ್ಪ, ಕಾರ್ಯಪಾಲಕ ಗೋಣೆಪ್ಪ ಜಿರ್ಲಿ, ಪ್ರಕಾಶ, ತಾಂತ್ರಿಕ ಸಹಾಯಕ ಸಂತೋಷ ನಂದಾಪೂರ, ಐಇಸಿ ಸಂಯೋಜಕ ಲಕ್ಷ್ಮಣ ಕೆರಳ್ಳಿ ಹಾಗೂ ಪಂಚಾಯಿತಿ ಸದಸ್ಯರು ಮತ್ತು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT